ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮಹಾರಾಷ್ಟ್ರ ಪೊಲೀಸರ ಡ್ರಗ್ಸ್ ಸೀಜ್ ಕುರಿತು ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರು ಪೊಲೀಸರು ಈ ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ಸಹಕರಿಸಿದ್ದಾರೆಂದು ಹೇಳಿದ್ದಾರೆ. ಹೊಸ ವರ್ಷಾಚರಣೆಗೆ ಭದ್ರತಾ ಕ್ರಮಗಳನ್ನು ವಿವರಿಸಿದ ಅವರು, ಈಗಾಗಲೇ 165 ಕೋಟಿ ರೂ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿರುವುದಾಗಿ ತಿಳಿಸಿದರು.
ಬೆಂಗಳೂರು, ಡಿಸೆಂಬರ್ 28: ಮಹಾರಾಷ್ಟ್ರ ಪೊಲೀಸರಿಂದ ರಾಜ್ಯದಲ್ಲಿ ಡ್ರಗ್ಸ್ ಸೀಜ್ ವಿಚಾರ ನಮ್ಮ ಪೊಲೀಸರಿಗೆ ಗೊತ್ತಿರಲಿಲ್ವ ಎಂಬ ಮಾಧ್ಯಮದವರ ಪ್ರಶ್ನೆಗೆ ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಮಹಾರಾಷ್ಟ್ರ ಪೊಲೀಸರ ಕಾರ್ಯಾಚರಣೆ ವೇಳೆ ನಮ್ಮ ಬೆಂಗಳೂರು ನಗರ ಪೊಲೀಸರು, ಡಿಸಿಪಿ ಸೇರಿದಂತೆ ಎನ್.ಸಿ.ಬಿ ಮತ್ತು ನಮ್ಮ ವಿಶೇಷ ಕಾರ್ಯಾಚರಣಾ ತಂಡ ಕೂಡ ಸಕ್ರಿಯವಾಗಿ ಭಾಗವಹಿಸಿತ್ತು. ಕರ್ನಾಟಕ ಪೊಲೀಸರಿಗೆ ಇದರ ಬಗ್ಗೆ ಮಾಹಿತಿ ಇರಲಿಲ್ಲ ಎಂಬುವುದು ಸುಳ್ಳು ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Dec 28, 2025 09:03 PM
