ದರ್ಶನ್ ಕೇಸ್: ಪೊಲೀಸರ ತನಿಖೆ ಬಗ್ಗೆ ಅನುಮಾನ; ಗೃಹ ಸಚಿವರ ಸ್ಪಷನೆ ಇಲ್ಲಿದೆ..

Updated on: Feb 24, 2026 | 3:57 PM

ರೇಣುಕಾಸ್ವಾಮಿ ಕೇಸ್​ನ ಆರೋಪಿಗಳನ್ನು ಸುಳ್ಳು ಮಹಜರು ಮೂಲಕ ಸಿಕ್ಕಿಹಾಕಿಸಲು ಪೊಲೀಸರು ಪ್ರಯತ್ನಿಸಿದ್ದಾರೆ ಎಂಬ ಆರೋಪ ಎದುರಾಗಿದೆ. ಆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದಾರೆ. ವಕೀಲರ ಆಪಾದನೆಗಳಿಗೆ ಪೊಲೀಸರು ಉತ್ತರ ಕೊಡುತ್ತಾರೆ ಎಂದು ಅವರು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಈ ಕೇಸ್​​ನಲ್ಲಿ ದರ್ಶನ್ (Darshan) ಅವರು ಪ್ರಮುಖ ಆರೋಪಿ ಆಗಿದ್ದಾರೆ. ಇನ್ನುಳಿದ ಆರೋಪಿಗಳ ಮೊಬೈಲ್ ವಶಕ್ಕೆ ಪಡೆದ ಪೊಲೀಸರ ತನಿಖಾ ಕ್ರಮದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಆರೋಪಿಗಳ ಮೊಬೈಲ್ ಅನ್ನು ಬೇರೆ ಎಲ್ಲೋ ಮಹಜರು ಮಾಡಿ, ಅದನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಮಾಡಿದ್ದು ಎಂದು ಪೊಲೀಸರು ಹೇಳಿದ್ದಾರೆ ಎಂಬುದು ಆರೋಪಿಗಳ ಲಾಯರ್ ವಾದ. ಆ ಬಗ್ಗೆ ಗೃಹಸಚಿವ ಜಿ. ಪರಮೇಶ್ವರ್ ಅವರು ಸ್ಪಷ್ಟನೆ ನೀಡಿದ್ದಾರೆ. ‘ಆರೋಪಿಗಳ ಪರ ವಕೀಲರು ತಕರಾರು ಮಾಡಲಿ. ನಮ್ಮ ಕೆಲಸ ನಾವು ಮಾಡುತ್ತೇವೆ. ಆರೋಪಿಗಳ ಪರವಾದ ವಕೀಲರು ಮಾಡುವ ಆಪಾದನೆಗಳಿಗೆ ಪೊಲೀಸ್ ಇಲಾಖೆಯವರು ಸರಿಯಾದ ಉತ್ತರ ಕೊಡಬೇಕು, ಕೊಡುತ್ತಾರೆ’ ಎಂದು ಜಿ. ಪರಮೇಶ್ವರ (G Parameshwara) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More