ತುಮಕೂರು, ಅಕ್ಟೋಬರ್ 02: ನವೆಂಬರ್ ತಿಂಗಳಲ್ಲಿ ಯಾವುದೇ ರಾಜಕೀಯ ಕ್ರಾಂತಿ ನಡೆಯುವುದಿಲ್ಲ, ಎಲ್ಲವೂ ಶಾಂತಿ ಇದೆ ಎಂದು ಗೃಹ ಸಚಿವ ಡಾ. ಜಿ. ಪರಮೆಶ್ವರ್ (G. Parameshwar) ಹೇಳಿದ್ದಾರೆ. ನವೆಂಬರ್ ನಲ್ಲಿ ಡಿಕೆಶಿ ಮುಖ್ಯಮಂತ್ರಿ ಆಗ್ತಾರೆ ಎಂಬ L.R. ಶಿವರಾಮೇಗೌಡ ಹೇಳಿಕೆಗೆ ತುಮಕೂರಲ್ಲಿ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಈಗ ಸಿಎಂ ಆಗಿದ್ದಾರೆ. 5 ವರ್ಷ ಅವರೇ ಸಿಎಂ ಆಗಿ ಇರುತ್ತಾರೆ ಎಂದು ಅಂದುಕೊಂಡಿದ್ದೇವೆ. ಪಕ್ಷದ ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದನ್ನು ಒಪ್ಪಿಕೊಳ್ಳೋದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.