ಕೇಂದ್ರೀಯ ತನಿಖಾ ಏಜೆನ್ಸಿಗಳನ್ನು ರಾಜಕೀಯ ಅಸ್ತ್ರಗಳಾಗಿ ಬಳಸಬಾರದು: ಜಿ ಪರಮೇಶ್ವರ್

|

Updated on: Jul 13, 2024 | 12:30 PM

ವಾಲ್ಮೀಕಿ ನಿಗಮದ ಹಗರಣದಲ್ಲಿ ಮತ್ತೊಬ್ಬ ಆರೋಪಿಯಾಗಿರುವ ಶಾಸಕ ಮತ್ತು ನಿಗಮ ಅಧ್ಯಕ್ಷ ಬಸನಗೌಡ ದದ್ದಲ್ ಅವರು ಎಲ್ಲೂ ಓಡಿಹೋಗಿಲ್ಲ ತಮ್ಮ ಕುಟುಂಬದವರೊಂದಿಗೆ ಓಡಾಡಿಕೊಂಡಿದ್ದಾರೆ ಎಂದು ಹೇಳಿದ ಪರಮೇಶ್ವರ್ ದದ್ದಲ್ ಮತ್ತು ನಾಗೇಂದ್ರ ಇಬ್ಬರನ್ನೂ ಎಸ್ಐಟಿ ತನಿಖೆಗೊಳಪಡಿಸಿದೆ ಎಂದರು.

ಬೆಂಗಳೂರು: ಈಡಿ ಅಧಿಕಾರಿಗಳು ತಮಗಿರುವ ಮಾಹಿತಿ ಪ್ರಕಾರ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ, ಅದು ಕಾನೂನು ಪ್ರಕ್ರಿಯೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ನಾಗೇಂದ್ರ ಅವರನ್ನು ಈಡಿ ವಶಕ್ಕೆ ತೆಗೆದುಕೊಂಡಿರುವುದಕ್ಕೆ ತಮ್ಮ ಅಭ್ಯಂತರವೇನೂ ಇಲ್ಲ, ಆದರೆ ಕೇಂದ್ರೀಯ ತನಿಖಾ ಏಜೆನ್ಸಿಗಳನ್ನು ರಾಜಕೀಯವಾಗಿ ಬಳಸಿಕೊಳ್ಳುವುದನ್ನು ಕಾಂಗ್ರೆಸ್ ಮೊದಲಿಂದಲೂ ವಿರೋಧಿಸುತ್ತದೆ ಎಂದು ಗೃಹ ಸಚಿವ ಹೇಳಿದರು. ಇದನ್ನು ಯಾಕೆ ಹೇಳಬೇಕಾಗಿದೆಯೆಂದರೆ, ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣವನ್ನು ಸರ್ಕಾರ ರಚಿಸಿರುವ ಎಸ್ಐಟಿ ತನಿಖೆ ನಡೆಸುತ್ತಿದೆ ಮತ್ತು ಅದಕ್ಕೆ ಸಂಬಂಧಿಸಿದ ಬ್ಯಾಂಕ್ ವ್ಯವಹಾರಗಳನ್ನು ಸಿಬಿಐ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈಡಿ ಮಧ್ಯೆ ಪ್ರವೇಶಿಸುವ ಅಗತ್ಯವಿಲ್ಲರಲಿಲ್ಲ ಎಂದು ಪರಮೇಶ್ವರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ಗೃಹ ಸಚಿವ ಪರಮೇಶ್ವರ್​ಗೆ ಮನವಿ ಸಲ್ಲಿಸಲು ಬಂದ ಯುವಕನ ಮೇಲೆ ಪೊಲೀಸ್ ಶಕ್ತಿ ಪ್ರದರ್ಶನ!