ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​: ಯಾರಿಗೆಲ್ಲ ಧನ್ಯವಾದ ಹೇಳಿದ್ರು ನೋಡಿ

Updated on: Jun 03, 2026 | 3:07 PM

ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾದ ಡಾ. ಜಿ. ಪರಮೇಶ್ವರ್ ಅವರು ತಮ್ಮ ಆಯ್ಕೆಗೆ ಕಾಂಗ್ರೆಸ್ ಹೈಕಮಾಂಡ್, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸುರ್ಜೇವಾಲ ಮತ್ತು ವೇಣುಗೋಪಾಲ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ರಾಜ್ಯದ ಜನರಿಗೆ ಪಕ್ಷದ ಸಿದ್ಧಾಂತಗಳ ಹಿನ್ನೆಲೆಯಲ್ಲಿ ಕೆಲಸ ಮಾಡಲು ಇದು ಮತ್ತೊಂದು ಅವಕಾಶ ಎಂದಿರುವ ಅವರು ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರಿಗೂ ಧನ್ಯವಾದ ತಿಳಿಸಿದ್ದಾರೆ.

ಬೆಂಗಳೂರು, ಜೂನ್​​ 03: ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾದ ಡಾ. ಜಿ. ಪರಮೇಶ್ವರ್ ಅವರು, ತಮ್ಮನ್ನು ಈ ಮಹತ್ವದ ಹುದ್ದೆಗೆ ಆಯ್ಕೆ ಮಾಡಿದ ಪಕ್ಷದ ಹೈಕಮಾಂಡ್‌ಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಕೆ.ಸಿ. ವೇಣುಗೋಪಾಲ್ ಅವರಿಗೆ ವಿಶೇಷ ಧನ್ಯವಾದಗಳನ್ನು ಹೇಳಿದ್ದಾರೆ. ತನ್ನ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ನಂಬಿಕೆಗೆ ತಾನು ಆಭಾರಿಯಾಗಿರುವುದಾಗಿ ಡಾ. ಪರಮೇಶ್ವರ್ ತಿಳಿಸಿದ್ದು, ಇದೊಂದು ಸುವರ್ಣಾವಕಾಶ ಎಂದು ಬಣ್ಣಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More