G7 Summit: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆ ಪ್ರಧಾನಿ ಮೋದಿ ಮಾತುಕತೆ

|

Updated on: Jun 14, 2024 | 4:46 PM

ಇಟಲಿಯ ಅಪುಲಿಯಾ ಪ್ರದೇಶದಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಉಕ್ರೇನಿಯಾ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು (ಶುಕ್ರವಾರ) ಮಾತುಕತೆ ನಡೆಸಿದ್ದಾರೆ. ರಷ್ಯಾ-ಉಕ್ರೇನ್ ಸಂಘರ್ಷದ ವಿವಿಧ ಅಂಶಗಳ ಕುರಿತು ಝೆಲೆನ್ಸ್ಕಿ ಅವರು ಪ್ರಧಾನಿ ನರೇಂದ್ರ ಮೋದಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ನವದೆಹಲಿ: ಇಂದಿನಿಂದ ಇಟಲಿಯಲ್ಲಿ ಜಿ7 ಶೃಂಗಸಭೆ (Italy G7 Summit) ನಡೆಯುತ್ತಿದೆ. ವಿವಿಧ ದೇಶಗಳ ನಾಯಕರು ಈ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಕೂಡ ಇಟಲಿಯಲ್ಲಿ ನಡೆಯುತ್ತಿರುವ ಶೃಂಗಸಭೆಯಲ್ಲಿ ಭಾಗವಹಿಸಿದ್ದಾರೆ. ಈ ವೇಳೆ ಇಂಗ್ಲೆಂಡ್, ಉಕ್ರೇನ್ ಮತ್ತಿತರ ದೇಶಗಳ ನಾಯಕರ ಜೊತೆ ಪ್ರಧಾನಿ ಮೋದಿ ಮಾತುಕತೆ ನಡೆಸಿದ್ದಾರೆ.

ಕಳೆದ ವರ್ಷ ಮೇ ತಿಂಗಳಲ್ಲಿ ಹಿರೋಷಿಮಾದಲ್ಲಿ ನಡೆದ ಹಿಂದಿನ ಜಿ7 ಶೃಂಗಸಭೆಯ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಭೇಟಿ ಮಾಡಿದ್ದರು. ಉಕ್ರೇನ್‌ನಲ್ಲಿನ ಸಂಘರ್ಷವನ್ನು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಪರಿಹರಿಸಬೇಕು ಎಂದು ಭಾರತ ಪ್ರತಿಪಾದಿಸುತ್ತಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:44 pm, Fri, 14 June 24

Follow us on