ಗದಗ: ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ ನಿಧಿ ಪತ್ತೆ, ಎಷ್ಟು ಕೆಜಿ ಗೊತ್ತಾ?

Edited By:

Updated on: Jan 10, 2026 | 5:28 PM

ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮನೆ ಅಡಿಪಾಯ ಅಗೆಯುವಾಗ ಸುಮಾರು ಒಂದು ಕೆಜಿ ತೂಕದ ಹಳೆಯ ನಿಧಿ ಪತ್ತೆಯಾಗಿದೆ. ಗಂಗವ್ವ ಬಸವರಾಜ ರಿತ್ತಿ ಅವರ ಮನೆ ಜಾಗದಲ್ಲಿ ತಂಬಿಗೆಯಲ್ಲಿ ಚಿನ್ನಾಭರಣಗಳು ದೊರೆತಿವೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಪುರಾತತ್ವ ಇಲಾಖೆ ತಜ್ಞರಿಂದ ಪರಿಶೀಲನೆ ನಡೆಯುತ್ತಿದೆ. ಈ ಚಿನ್ನಾಭರಣಗಳು ಯಾವ ಕಾಲಕ್ಕೆ ಸೇರಿವೆ ಎಂಬುದರ ಬಗ್ಗೆ ತನಿಖೆ ಆರಂಭವಾಗಿದೆ. ನೂರಾರು ಜನ ಇದನ್ನು ನೋಡಲು ಸೇರಿದ್ದಾರೆ.

ಗದಗ, ಜ.10: ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆಯಾಗಿರುವ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ. ತಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆಯಾಗಿದೆ. ಗಂಗವ್ವ ಬಸವರಾಜ ರಿತ್ತಿ ಮನೆ ಜಾಗದಲ್ಲಿ ಈ ನಿಧಿ ಪತ್ತೆಯಾಗಿದೆ. ಇದೀಗ ನಿಧಿ ನೋಡಲು ನೂರಾರು ಜನ ಸೇರಿದ್ದಾರೆ. ಸ್ಥಳಕ್ಕೆ ಎಡಿಸಿ ದುರ್ಗೇಶ್, ಎಸ್​ಪಿ ರೋಹನ್ ಜಗದೀಶ್, ಎಸಿ ರಂಗಪ್ಪ, ತಹಶೀಲ್ದಾರ್ ಶ್ರೀನಿವಾಸ ಕುಲಕರ್ಣಿ ನೀಡಿದ್ದಾರೆ. ಲಕ್ಕುಂಡಿ ಪ್ರಾಧಿಕಾರದ ಸದಸ್ಯರು, ಪುರತತ್ವ ಸಿಬ್ಬಂದಿಯಿಂದ ಪರಿಶೀಲನೆ ಮಾಡಲಾಗುತ್ತದೆ. ಪತ್ತೆಯಾದ ಚಿನ್ನಾಭರಣ ಯಾರ ಕಾಲದ್ದು ಎಂಬ ತನಿಖೆ ಕೂಡ ನಡೆಯುತ್ತಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

 

Published on: Jan 10, 2026 05:28 PM