ಗದಗದಲ್ಲಿ ಮಕ್ಕಳ, ಗರ್ಭಿಣಿಯರ ಪೌಷ್ಠಿಕ ಆಹಾರಕ್ಕೆ ಕನ್ನ!

Edited By:

Updated on: Feb 11, 2026 | 12:54 PM

ಮೊಟ್ಟೆ ಮತ್ತು ಹಾಲಿಗೆ ಕೊರತೆ ಜೊತೆಗೆ ಮಕ್ಕಳ ಅನ್ನಕ್ಕೂ ಕನ್ನ ಹಾಕಲಾಗುತ್ತಿದೆ ಎಂದು ಹೆಳಲಾಗಿದೆ. ಅಲ್ಲದೆ, ಪೂರೈಕೆಯಾಗುವ ಗೋಧಿಯಲ್ಲಿ ನುಸಿಗಳಿದ್ದು, ಕಳಪೆ ಆಹಾರ ನೀಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಘಟನೆಗಳಿಂದ ಆಕ್ರೋಶಗೊಂಡಿರುವ ಗ್ರಾಮಸ್ಥರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿರುದ್ಧ ಧ್ವನಿ ಎತ್ತಿದ್ದಾರೆ. ಅಧಿಕಾರಿಗಳು ಅನುದಾನ ಬಿಡುಗಡೆ ಮಾಡದಿರುವುದು ಅಥವಾ ಬಿಡುಗಡೆಯಾದ ಅನುದಾನ ಅಂಗನವಾಡಿಗಳಿಗೆ ತಲುಪದಿರುವುದು ಈ ಸಮಸ್ಯೆಗಳಿಗೆ ಕಾರಣ ಎನ್ನಲಾಗಿದೆ.

ಗದಗ, ಫೆಬ್ರವರಿ 11: ಜಿಲ್ಲೆಯ ಅಂಗನವಾಡಿಗಳಲ್ಲಿ ಮಕ್ಕಳು ಮತ್ತು ಗರ್ಭಿಣಿ ಸ್ತ್ರೀಯರಿಗೆ ಪೌಷ್ಟಿಕ ಆಹಾರದ ಕೊರತೆ ಎದುರಾಗಿದೆ. ಮುಂಡರಗಿ ತಾಲೂಕಿನ ಚುರ್ಚಿಹಾಳ ಗ್ರಾಮದ ಅಂಗನವಾಡಿಗಳಲ್ಲಿ (Anganwadi) ಜನವರಿ ತಿಂಗಳ ಮೊಟ್ಟೆ ಹಣ ಫೆಬ್ರವರಿ 11ರವರೆಗೂ ಬಿಡುಗಡೆಯಾಗಿಲ್ಲ. ಇದರ ಪರಿಣಾಮವಾಗಿ, ಒಂದು ಮೊಟ್ಟೆಯನ್ನು ಮೂರು ಮಕ್ಕಳಿಗೆ ಹಂಚಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಮೊಟ್ಟೆ ಮತ್ತು ಹಾಲಿಗೆ ಕೊರತೆ ಜೊತೆಗೆ ಮಕ್ಕಳ ಅನ್ನಕ್ಕೂ ಕನ್ನ ಹಾಕಲಾಗುತ್ತಿದೆ ಎಂದು ಹೆಳಲಾಗಿದೆ. ಅಲ್ಲದೆ, ಪೂರೈಕೆಯಾಗುವ ಗೋಧಿಯಲ್ಲಿ ನುಸಿಗಳಿದ್ದು, ಕಳಪೆ ಆಹಾರ ನೀಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಘಟನೆಗಳಿಂದ ಆಕ್ರೋಶಗೊಂಡಿರುವ ಗ್ರಾಮಸ್ಥರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿರುದ್ಧ ಧ್ವನಿ ಎತ್ತಿದ್ದಾರೆ. ಅಧಿಕಾರಿಗಳು ಅನುದಾನ ಬಿಡುಗಡೆ ಮಾಡದಿರುವುದು ಅಥವಾ ಬಿಡುಗಡೆಯಾದ ಅನುದಾನ ಅಂಗನವಾಡಿಗಳಿಗೆ ತಲುಪದಿರುವುದು ಈ ಸಮಸ್ಯೆಗಳಿಗೆ ಕಾರಣ ಎನ್ನಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More