AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗದಲ್ಲಿ ಅನ್ನಭಾಗ್ಯ ಅಕ್ಕಿಗೆ ಕನ್ನ: ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 32 ಟನ್ ಜಪ್ತಿ

ಗದಗದಲ್ಲಿ ಅನ್ನಭಾಗ್ಯ ಅಕ್ಕಿಗೆ ಕನ್ನ: ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 32 ಟನ್ ಜಪ್ತಿ

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Jul 16, 2026 | 2:36 PM

Share

Gadag News: ಅನ್ನಭಾಗ್ಯ ಯೋಜನೆಯ 32 ಟನ್ ಅಕ್ಕಿಯನ್ನು ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಜಾಲವನ್ನು ಆಹಾರ ಇಲಾಖೆ ಮತ್ತು ಪೊಲೀಸರು ಗದಗದಲ್ಲಿ ಭೇದಿಸಿದ್ದಾರೆ. ಬಿಂಕದಕಟ್ಟೆ ಗ್ರಾಮದಲ್ಲಿ ಲಾರಿ ವಶಪಡಿಸಿಕೊಂಡಿದ್ದು, ನಕಲಿ ದಾಖಲೆಗಳನ್ನು ಸೃಷ್ಟಿಸಿ ಹಾವೇರಿ ಎಪಿಎಂಸಿ ಹೆಸರಲ್ಲಿ ಅಕ್ಕಿ ಸಾಗಾಟ ಮಾಡಲಾಗುತ್ತಿತ್ತು ಎಂಬುದು ಗೊತ್ತಾಗಿದೆ. ಪ್ರಕರಣ ಸಂಬಂಧ ಚಾಲಕ ಮತ್ತು ಕ್ಲೀನರ್‌ನನ್ನು ಬಂಧಿಸಲಾಗಿದ್ದು, ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಗದಗ, ಜುಲೈ 16: ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಅನ್ಮಭಾಗ್ಯ ಅಕ್ಕಿಯನ್ನು ಕಾರ್ಯಾಚರಣೆ ನಡೆಸಿ ಆಹಾರ ಇಲಾಖೆ ಹಾಗೂ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಗದಗ ತಾಲೂಕಿನ ಬಿಂಕದಟ್ಟಿ ಗ್ರಾಮದ ಬಳಿ ನಡೆದಿದೆ. ಲಾರಿಯಲ್ಲಿ ಸಾಗಿಸುತ್ತಿದ್ದ 32 ಟನ್ ತೂಕದ 608 ಚೀಲ ಅಕ್ಕಿ ಜಪ್ತಿ ಮಾಡಲಾಗಿದ್ದು, ಆರೋಪಿಗಳು ಹಾವೇರಿ ಕೃಷಿ ಉತ್ಪನ್ನ ಮಾರುಕಟ್ಟೆ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಅಕ್ರಮ ಸಾಗಾಟ ಮಾಡುತ್ತಿದ್ದರು ಎಂಬುದು ಗೊತ್ತಾಗಿದೆ. ಲಾರಿ ಚಾಲಕ ಮತ್ತು ಕ್ಲೀನರ್​​ನ ವಶಕ್ಕೆ ಪಡೆಯಲಾಗಿದ್ದು, ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jul 16, 2026 02:36 PM

Follow Us