AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್​ ಶಾ ಹೇಳಿಕೆ ಖಂಡಿಸಿ ಗದಗ-ಬೆಟಗೇರಿ ಬಂದ್​: ಶಾಲಾ-ಕಾಲೇಜುಗಳಿಗೆ ರಜೆ

ಅಮಿತ್​ ಶಾ ಹೇಳಿಕೆ ಖಂಡಿಸಿ ಗದಗ-ಬೆಟಗೇರಿ ಬಂದ್​: ಶಾಲಾ-ಕಾಲೇಜುಗಳಿಗೆ ರಜೆ

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: ವಿವೇಕ ಬಿರಾದಾರ|

Updated on:Dec 24, 2024 | 11:13 AM

Share

ಕೇಂದ್ರ ಸಚಿವ ಅಮಿತ್ ಶಾ ಅವರು ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ದಲಿತ ಸಂಘಟನೆಗಳು ಗದಗ-ಬೆಟಗೇರಿ ಬಂದ್‌ಗೆ ಕರೆ ನೀಡಿವೆ. ವಿವಿಧ ಸಂಘಟನೆಗಳು ಅಮಿತ್ ಶಾ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟಿಸಿದವು. ಬಂದ್‌ನಿಂದಾಗಿ ನಗರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಗದಗ, ಡಿಸೆಂಬರ್​ 24: ಸಂಸತ್​ನಲ್ಲಿ ಕೇಂದ್ರ ಸಚಿವ ಅಮಿತ್ ಶಾ (Amit Shah) ಅವರು ಡಾ. ಬಿಆರ್​ ಅಂಬೇಡ್ಕರ್ (BR Ambedkar)​ ಅವರಿಗೆ ಅಪಮಾನ ಮಾಡಿದ್ದಾರೆ ಅಂತ ವಿವಿಧ ದಲಿತಪರ ಸಂಘಟನೆಗಳು ಮಂಗಳವಾರ (ಡಿ.24) ಗದಗ-ಬೆಟಗೇರಿ ಅವಳಿ ನಗರ ಸಂಪೂರ್ಣ ಬಂದ್​ಗೆ ಕರೆ ಕೊಟ್ಟಿವೆ. ಬಂದ್​ಗೆ ಗದಗ ಜಿಲ್ಲಾ ಕಾಂಗ್ರೆಸ್​​ ಕಮಿಟಿ, ಲಿಂಗಾಯತ ಪ್ರಗತಿಶೀಲ ಸಂಘ, ಕನ್ನಡಪರ ಸಂಘಟನೆಗಳು, ವ್ಯಾಪಾರಿ ಸಂಘಟನೆಗಳು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿವೆ.

ಅಮಿತ್​ ಶಾ ಅವರ ವಿರುದ್ಧ ವಿವಿಧ ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ನಡೆಸುತ್ತಿವೆ. ಸಂಜೆ 6 ಗಂಟೆಯವರೆಗೆ ಅವಳಿ ನಗರ ಬಂದ್ ಇರಲಿದೆ. ಸಂಘಟನೆಗಳು ಅಮಿತ್​ ಶಾ ಅವರ ರಾಜಿನಾಮೆ ಆಗ್ರಹಿಸಿವೆ. ಗದಗ ನಗರದ ಮುಳಗುಂದ ನಾಕಾ ಬಳಿ ಹುಬ್ಬಳ್ಳಿ ರಸ್ತೆಯಲ್ಲಿ ಮತ್ತು ಬೆಟಗೇರಿಯಲ್ಲಿ ರೋಣ ರಸ್ತೆ ತಡೆದು ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಬಂದ್ ಹಿನ್ನೆಲೆ ಗದಗ-ಬೆಟಗೇರಿ ನಗರದ ತರಕಾರಿ ಮಾರುಕಟ್ಟೆ ಸ್ಥಬ್ದವಾಗಿದೆ.

ಇದನ್ನೂ ಓದಿ: ಅಮಿತ್ ಶಾ ಹೇಳಿಕೆ ಖಂಡಿಸಿ ಕಲಬುರಗಿ ಬಂದ್: ಬಸ್​ಗಳಿಲ್ಲದೆ ​​ನಿಲ್ದಾಣ ಖಾಲಿ

ವಿವಿಧ ಸಂಘಟನೆಗಳು ಎನ್​ಡಬ್ಲೂಕೆಆರ್​ಟಿಸಿ ಡಿಪೋ ಮುತ್ತಿಗೆ ಹಾಕಿ ಪ್ರತಿಭಟಿಸಿದವು. ಬಸ್ ಸಂಚಾರಕ್ಕೆ ಅಣಿಯಾಗುತ್ತಿದ್ದ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತವಾಯಿತು. ಇದರಿಂದ ಪ್ರಯಾಣಿಕರು ಪರದಾಡಿದರು. ಶಾಲಾ-ಕಾಲೇಜು ವಿದ್ಯಾರ್ಥಿಗಳು, ಪ್ರಯಾಣಿಕರಿಗೆ ಬಂದ್ ಬಿಸಿ ತಟ್ಟಿದೆ. ಬಂದ್​ ಹಿನ್ನೆಲೆಯಲ್ಲಿ ಗದಗ-ಬೆಟಗೇರಿ ನಗರದ ಶಾಲೆಗಳಿಗೆ ರಜೆ ನೀಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Dec 24, 2024 11:13 AM
Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More