ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ಸಾರಿಗೆ ನೌಕರರ ದರ್ಪ: ವಿಡಿಯೋ ನೋಡಿ

Edited By:

Updated on: Apr 23, 2026 | 4:45 PM

ಗದಗ ನಗರದ ಪುಟ್ಟರಾಜ್ ಗವಾಯಿ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಯ ಮೇಲೆ ಸಾರಿಗೆ ನೌಕರರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಸ್‌ ನಿಲ್ಲಿಸದ ಕಾರಣ ಆರಂಭವಾದ ವಾಗ್ವಾದವು ಹಲ್ಲೆಗೆ ತಿರುಗಿದೆ. ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟಿಸಿದರು, ತಪ್ಪಿತಸ್ಥ ನೌಕರರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು. ಇದರಿಂದ ಬಸ್ ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ಪರದಾಡಿದರು. ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ತಿಳಿಗೊಳಿಸಲು ಯತ್ನಿಸಿದರು.

ಗದಗ, ಏಪ್ರಿಲ್​​ 23: ಬಸ್ ನಿಲ್ಲಿಸಿ ಅಂದಿದಕ್ಕೆ ವಿದ್ಯಾರ್ಥಿಗಳ‌ ಮೇಲೆ ಸಾರಿಗೆ ನೌಕರರಿಂದ ದರ್ಪ‌‌ ಮೆರೆದ ಘಟನೆಯೊಂದು ಗದಗ ನಗರದ ಪುಟ್ಟರಾಜ್ ಗವಾಯಿಗಳ ಬಸ್ ನಿಲ್ದಾಣದಲ್ಲಿ ನಡೆದಿದೆ. ಸಾರಿಗೆ ನೌಕರರು ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೂಡ ಕೇಳಿಬಂದಿದೆ. ವಿದ್ಯಾರ್ಥಿಗಳು ಬಸ್ ಹತ್ತಲು ಕೈ ತೋರಿಸಿದರೂ ಚಾಲಕ ಬಸ್ ನಿಲ್ಲಿಸಿಲ್ಲ. ಇದನ್ನು ಪ್ರಶ್ನಿಸಲು ಹೋದ ವಿದ್ಯಾರ್ಥಿಗಳು ಮತ್ತು ಸಾರಿಗೆ ನೌಕರರ ನಡುವೆ ಮಾತಿನ ಚಕಮಕಿ ಉಂಟಾಗಿದೆ. ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು, ನೌಕರರು ಹಲ್ಲೆ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ಬಸ್ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲ್ಲೆ ಮಾಡಿದ ನೌಕರನ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದೆ. ಸ್ಥಳಕ್ಕೆ ದೌಡಾಯಿಸಿದ ಶಹರ ಪೊಲೀಸ್ ಠಾಣೆ ಪೊಲೀಸರು ವಿದ್ಯಾರ್ಥಿಗಳ ಮನವೊಲಿಸಲು ಹರಸಹಾಸ ಪಟ್ಟರು. ಬಸ್ ಸಂಚಾರ ಸ್ಥಗಿತ ಹಿನ್ನೆಲೆ ಪ್ರಯಾಣಿಕರು ಪರದಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More