ಚಲಿಸುತ್ತಿರುವಾಗಲೇ ಕಳಚಿದ ಸರ್ಕಾರಿ ಬಸ್​​ ಚಕ್ರ: ಮುಂದೇನಾಯ್ತು?

Edited By:

Updated on: Jun 27, 2025 | 2:40 PM

ಗದಗ ಜಿಲ್ಲೆಯ ಶಿರಹಟ್ಟಿಯ ಬಳಿ ಬೆಳ್ಳಟ್ಟಿಯಿಂದ ಶಿರಹಟ್ಟಿಗೆ ತೆರಳುತ್ತಿದ್ದ ಬಸ್‌ನ ಮುಂಭಾಗದ ಚಕ್ರ ಚಲಿಸುದ್ದ ವೇಳೆಯೇ ಕಳಚಿಕೊಂಡಿರುವಂತಹ ಘಟನೆ ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದ ಅದೃಷ್ಟವಶಾತ್ ಭಾರಿ ಅಪಘಾತ ತಪ್ಪಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ತಮ್ಮ ಮೊಬೈಲ್​ನಲ್ಲಿ ವಿಡಿಯೋ ಸೆರೆ ಹಿಡಿದಿದ್ದಾರೆ.

ಗದಗ, ಜೂನ್​ 27: ಜಿಲ್ಲೆಯ ಶಿರಹಟ್ಟಿಯ ಬಳಿ ಬೆಳ್ಳಟ್ಟಿಯಿಂದ ಶಿರಹಟ್ಟಿಗೆ ತೆರಳುತ್ತಿದ್ದ ಬಸ್‌ನ (Bus) ಮುಂಭಾಗದ ಚಕ್ರ ಚಲಿಸುದ್ದ ವೇಳೆಯೇ ಕಳಚಿಕೊಂಡಿರುವಂತಹ ಘಟನೆ ನಡೆದಿದೆ. ಅದೃಷ್ಟವಶಾತ್, ಚಾಲಕನ ಸಮಯಪ್ರಜ್ಞೆಯಿಂದ ಭಾರಿ ದುರಂತ ತಪ್ಪಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಕೋಟಾ ಬಸ್‌ಗಳ ಬಳಕೆಯ ಬಗ್ಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಹೊಸ ಬಸ್‌ಗಳನ್ನು ಒದಗಿಸುವಂತೆ ಒತ್ತಾಯಿಸಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Jun 27, 2025 02:12 PM
Follow Us
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More