ಗದಗ: ಕಾರಿನ ಮೇಲೆ ಪಾಕಿಸ್ತಾನ ಧ್ವಜ ಹಾಕಿ ಇನ್​ಸ್ಟಾಗ್ರಾಂ ಪೋಸ್ಟ್, ಎಫ್​ಐಆರ್ ಆದರೂ ಆರೋಪಿಯ ಬಂಧಿಸದ ಪೊಲೀಸರು

Edited By:

Updated on: Sep 10, 2025 | 12:16 PM

ಮಂಡ್ಯದ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ, ಶಿವಮೊಗ್ಗದ ಭದ್ರಾವತಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ವಿಚಾರ ಚರ್ಚೆಯಲ್ಲಿರುವಾಗಲೇ ಗದಗ ನಗರದಲ್ಲಿ ಕಾರಿನಲ್ಲಿ ಪಾಕಿಸ್ತಾನ ಧ್ವಜ ಹಾಕಿ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ ಘಟನೆ ವರದಿಯಾಗಿದೆ. ಘಟನೆ ಸಂಬಂಧ ಗದಗ ಶಹರ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಆದರೆ, ಆರೋಪಿಯನ್ನು ಈವರೆಗೆ ಬಂಧಿಸದೇ ಇರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಗದಗ, ಸೆಪ್ಟೆಂಬರ್ 10: ಗದಗ ನಗರದಲ್ಲಿ ಕಿಡಿಗೇಡಿಗಳು ಕಾರಿನ ಮೇಲೆ ಪಾಕಿಸ್ತಾನ ಧ್ವಜ ಹಾಕಿಕೊಂಡು ಓಡಾಡಿದ್ದಾರೆ. ಘಟನೆ ಸಂಬಂಧ ಸೆಪ್ಟೆಂಬರ್ 7ರಂದೇ ಗದಗ ನಗರ ಠಾಣೆಯಲ್ಲಿ ಸ್ವಯಂಪ್ರೇರಿತ ಎಫ್​ಐಆರ್ ದಾಖಲಾಗಿತ್ತು. ಆದರೂ ಆರೋಪಿಗಳನ್ನು ಪೊಲೀಸರು ಈವರೆಗೆ ಬಂಧಿಸಿಲ್ಲ. ಕಾರಿನ ಬೋನಟ್ ಮೇಲೆ ಪಾಕಿಸ್ತಾನ ಧ್ವಜ ಪ್ರದರ್ಶಿಸಿ ತಹಶೀನ್ ಎಂಬಾತನ ಇನ್​ಸ್ಟಾಗ್ರಾಂ ಐಡಿಯಿಂದ ಪೋಸ್ಟ್ ಮಾಡಲಾಗಿತ್ತು. ಸಮಾಜದ ಐಕ್ಯತೆಗೆ ಧಕ್ಕೆ, ಸೌಹಾರ್ಧತೆಗೆ ಬಾಧಕವಾಗುವ ಕೃತ್ಯ ಎಂದು ಪರಿಗಣಿಸಿ ಬಿಎನ್​ಎಸ್ ಕಾಯ್ದೆಯ ಕಲಂ 299, 353(2), R/W 3/5 ಅಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಇನ್ನೂ ಬಂಧಿಸಿಲ್ಲ. ದೇಶದ ಅನ್ನ ತಿಂದು ದ್ರೋಹ ಬಗೆಯುವರಿಗೆ ತಕ್ಕ ಶಿಕ್ಷೆಯಾಗಲಿ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More