AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ: ಸಹೋದರನಿಗಾಗಿ ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ

ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ: ಸಹೋದರನಿಗಾಗಿ ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Nov 24, 2026 | 11:12 AM

Share

ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ತಮ್ಮ ಕಿರಿಯ ಸಹೋದರನಿಂದ ಸರ್ಕಾರಿ ಕಾರು, ಗನ್‌ಮ್ಯಾನ್ ಹಾಗೂ ರೋಣಾದ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ರಾಜಾತಿಥ್ಯ ಕೊಡಿಸಿ ಅಧಿಕಾರ ದುರ್ಬಳಕೆ ಮಾಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಡಿಸಿ ಕಚೇರಿಯ ಆಪ್ತ ಸಹಾಯಕರ ಸೂಚನೆಯ ಮೇರೆಗೆ ಡಿಸಿ ಕುಟುಂಬದ ಐವರು ಸದಸ್ಯರಿಗೆ ಆತಿಥ್ಯ ನೀಡಿದ್ದಾಗಿ ತಹಶೀಲ್ದಾರ್ ದೃಢಪಡಿಸಿದ್ದಾರೆ.

ಗದಗ, ನವೆಂಬರ್ 24: ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ವಿರುದ್ಧ ಮೋಜು-ಮಸ್ತಿ ವಿವಾದದ ಬೆನ್ನಲ್ಲೇ ಇದೀಗ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಜಿಲ್ಲಾಧಿಕಾರಿಯವರ ಕಿರಿಯ ಸಹೋದರ ಸರ್ಕಾರಿ ಸೌಲಭ್ಯಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಗಳ ಪ್ರಕಾರ, ಗದಗ ಡಿಸಿ ಶ್ರೀಧರ್ ಅವರ ತಮ್ಮ ಸರ್ಕಾರಿ ಕಾರಿನಲ್ಲಿ ದರ್ಬಾರ್ ನಡೆಸಿದ್ದಾರೆ. ಇದಲ್ಲದೆ, ಅವರಿಗೆ ಗನ್‌ಮ್ಯಾನ್ ಜೊತೆ ರಾಜಾತಿಥ್ಯವನ್ನೂ ಒದಗಿಸಲಾಗಿದೆ. ರೋಣಾದ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಈ ಸರ್ಕಾರಿ ಸತ್ಕಾರ ನಡೆದಿದೆ ಎಂದು ತಿಳಿದುಬಂದಿದೆ.

ಡಿಸಿ ಕಚೇರಿಯ ಆಪ್ತ ಸಹಾಯಕರ ಫೋನ್ ಕರೆಯ ಮೇರೆಗೆ ಈ ಆತಿಥ್ಯವನ್ನು ನೀಡಲಾಗಿದ್ದು, ಡಿಸಿ ಕುಟುಂಬದ ಐವರು ಸದಸ್ಯರಿಗೆ ಆತಿಥ್ಯ ನೀಡುವಂತೆ ಸೂಚಿಸಲಾಗಿತ್ತು. ಈ ಕುರಿತು ಮಾಹಿತಿ ನೀಡಿರುವ ತಹಶೀಲ್ದಾರ್ ಅವರು, ಡಿಸಿ ಕಚೇರಿಯ ಕರೆ ಮೇರೆಗೆ ಆತಿಥ್ಯ ನೀಡಿದ್ದಾಗಿ ಖಚಿತಪಡಿಸಿದ್ದಾರೆ. ಕೆಲವೇ ದಿನಗಳ ಹಿಂದೆ ಡಿಸಿಯವರ ಬೀಳ್ಕೊಡುಗೆ ಸಮಾರಂಭದಲ್ಲಿ ಡಿಜೆ ಹಾಕಿ ಮೋಜು-ಮಸ್ತಿ ನಡೆದಿತ್ತು ಎಂದು ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಇದೀಗ ಸರ್ಕಾರಿ ಕಾರು, ಗನ್‌ಮ್ಯಾನ್ ಮತ್ತು ಪ್ರವಾಸಿ ಮಂದಿರದ ದುರ್ಬಳಕೆಯ ಆರೋಪಗಳು ಜಿಲ್ಲಾಧಿಕಾರಿಗಳ ಕಚೇರಿಯ ಕಾರ್ಯವೈಖರಿ ಕುರಿತು ಮತ್ತಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More