AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ ಬರದಿಂದ ರೈತರು ಸಂಕಷ್ಟದಲ್ಲಿರುವಾಗ ಗದಗ ಜಿಲ್ಲಾಧಿಕಾರಿ ನಿವಾಸದಲ್ಲಿ ಮೋಜು-ಮಸ್ತಿ

ಭೀಕರ ಬರದಿಂದ ರೈತರು ಸಂಕಷ್ಟದಲ್ಲಿರುವಾಗ ಗದಗ ಜಿಲ್ಲಾಧಿಕಾರಿ ನಿವಾಸದಲ್ಲಿ ಮೋಜು-ಮಸ್ತಿ

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Nov 22, 2026 | 9:55 AM

Share

ಗದಗ ಜಿಲ್ಲೆಯಲ್ಲಿ ಭೀಕರ ಬರಗಾಲದಿಂದ ರೈತರು ತತ್ತರಿಸುತ್ತಿರುವಾಗಲೇ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರಿಗೆ ಸರ್ಕಾರಿ ನಿವಾಸದಲ್ಲಿ ಅದ್ದೂರಿ ಬೀಳ್ಕೊಡುಗೆ ಪಾರ್ಟಿ ಆಯೋಜಿಸಲಾಗಿದೆ. ವರ್ಗಾವಣೆಗೊಂಡ ಡಿಸಿ ಹಾಗೂ ಹಿರಿಯ ಅಧಿಕಾರಿಗಳು ತಡರಾತ್ರಿಯವರೆಗೂ ಆಹಾರ, ಸಂಗೀತ ಮತ್ತು ನೃತ್ಯದೊಂದಿಗೆ ಮೋಜು-ಮಸ್ತಿ ನಡೆಸಿದ್ದಾರೆ. ಈ ವಿವಾದಾತ್ಮಕ ಘಟನೆ ರೈತರ ಬೆಳೆವಿಮೆ ಮತ್ತು ಪರಿಹಾರದ ಆತಂಕವನ್ನು ಹೆಚ್ಚಿಸಿದೆ.

ಗದಗ, ನವೆಂಬರ್ 22: ಗದಗ ಜಿಲ್ಲೆಯು ಭೀಕರ ಬರಗಾಲಕ್ಕೆ ತುತ್ತಾಗಿ ರೈತರು ತೀವ್ರ ಸಂಕಷ್ಟದಲ್ಲಿರುವಾಗಲೇ, ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರ ವರ್ಗಾವಣೆಯ ಹಿನ್ನೆಲೆಯಲ್ಲಿ ಅದ್ದೂರಿ ಬೀಳ್ಕೊಡುಗೆ ಸಮಾರಂಭ ನಡೆದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲಾಡಳಿತ ಭವನದ ಹಿಂಭಾಗದಲ್ಲಿರುವ ಡಿಸಿ ಸರ್ಕಾರಿ ನಿವಾಸದ ಆವರಣದಲ್ಲಿ ತಡರಾತ್ರಿಯವರೆಗೂ ಈ ಪಾರ್ಟಿ ನಡೆದಿದೆ. ಈ ಕಾರ್ಯಕ್ರಮದಲ್ಲಿ ಡಿಸಿ ಸಿ.ಎನ್. ಶ್ರೀಧರ್ ಹಾಗೂ ಹಿರಿಯ ಅಧಿಕಾರಿಗಳು ಮೋಜು-ಮಸ್ತಿ ಮಾಡಿದ್ದಾರೆ. ಜಾನಪದ ಹಾಡುಗಳಿಗೆ ಹುಚ್ಚೆದ್ದು ಕುಣಿದು ಕುಪ್ಪಳಿಸಿದ್ದಾರೆ. ಪಾರ್ಟಿಯಲ್ಲಿ ವೆಜ್ ಮತ್ತು ನಾನ್-ವೆಜ್ ಊಟದ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸಕ್ಕೆ ಅದ್ದೂರಿಯಾಗಿ ಅಲಂಕಾರ ಕೂಡ ಮಾಡಲಾಗಿತ್ತು.

ಒಂದೆಡೆ ಬರದಿಂದಾಗಿ ರೈತರು ಬೆಳೆ ನಷ್ಟ ಮತ್ತು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಇನ್ನೂ ಹಲವು ರೈತರಿಗೆ ಬೆಳೆ ವಿಮೆ ಮತ್ತು ಪರಿಹಾರ ಸಿಕ್ಕಿಲ್ಲ. ಇಂತಹ ಸನ್ನಿವೇಶದಲ್ಲಿ ಜಿಲ್ಲೆಯ ಉನ್ನತ ಅಧಿಕಾರಿಗಳು ಸಾರ್ವಜನಿಕ ಹಣದಲ್ಲಿ ಇಂತಹ ಅದ್ದೂರಿ ಪಾರ್ಟಿ ಆಯೋಜಿಸಿರುವುದು ರೈತರಿಗೆ ದೊಡ್ಡ ಆಘಾತವನ್ನುಂಟು ಮಾಡಿದೆ. ಜಿಲ್ಲೆಯಲ್ಲಿ ಬರ ಪರಿಸ್ಥಿತಿ ತಲೆದೋರಿರುವಾಗ, ಅಧಿಕಾರಿಗಳ ಈ ನಡೆ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನವನ್ನು ಎತ್ತಿ ತೋರಿಸುತ್ತದೆ ಎಂದು ಟೀಕೆಗಳು ವ್ಯಕ್ತವಾಗಿವೆ. ಈ ಘಟನೆ ರೈತ ಸಮುದಾಯದಲ್ಲಿ ತೀವ್ರ ಅಸಮಾಧಾನ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More