ಮಲ್ಲಿಕಾರ್ಜುನ ಖರ್ಗೆ ಜತೆ ಡಿಕೆ ಶಿವಕುಮಾರ್ ದಿಢೀರ್ ಪಯಣ!

|

Updated on: Mar 16, 2025 | 12:37 PM

ಕರ್ನಾಟಕ ರಾಜಕೀಯದಲ್ಲಿ, ಅದರಲ್ಲಿಯೂ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಸಂಘರ್ಷ, ಸಿಎಂ ಬದಲಾವಣೆ ಚರ್ಚೆ ಜೋರಾಗಿರುವ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ಪ್ರಯಾಣ ಬೆಳೆಸಿದ್ದಾರೆ. ಸರ್ಕಾರಿ ಹಾಗೂ ಖಾಸಗಿ ಕಾರ್ಯಕ್ರಮ ನಿಮಿತ್ತ ಉಭಯ ನಾಯಕರು ಪ್ರಯಾಣಿಸಿದ್ದರೂ ಹಲವು ಅನುಮಾನಗಳಿಗೆ ಇದು ಕಾರಣವಾಗಿದೆ.

ಬೆಂಗಳೂರು, ಮಾರ್ಚ್ 16: ಸರ್ಕಾರಿ ಹಾಗೂ ಖಾಸಗಿ ಕಾರ್ಯಕ್ರಮ ನಿಮಿತ್ತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಜತೆಯಾಗಿ ಪ್ರಯಾಣಿಸಿದರು. ಜತೆಯಾಗಿ ಕಾರಿನಲ್ಲಿ ಏರ್​ಪೋರ್ಟ್​ಗೆ ತೆರಳಿದ ಅವರು ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳಿ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಗದಗ ನಗರಕ್ಕೆ ತಲುಪಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ