AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gadag Government Hostel Raid: ನೂರಾರು ಬಡ ವಿದ್ಯಾರ್ಥಿಗಳ ಆಸರೆ ಆಗ್ಬೇಕಿದ್ದ ವಸತಿ ನಿಲಯದಲ್ಲಿ ಅವ್ಯವಸ್ಥೆ

Gadag Government Hostel Raid: ನೂರಾರು ಬಡ ವಿದ್ಯಾರ್ಥಿಗಳ ಆಸರೆ ಆಗ್ಬೇಕಿದ್ದ ವಸತಿ ನಿಲಯದಲ್ಲಿ ಅವ್ಯವಸ್ಥೆ

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Aug 08, 2026 | 12:50 PM

Share

ಜಿಲ್ಲೆಯ ಸರ್ಕಾರಿ ಹಾಸ್ಟೆಲ್‌ನಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದ್ದು, ನೂರಾರು ಬಡ ವಿದ್ಯಾರ್ಥಿಗಳು ತೊಂದರೆಗೊಳಗಾಗಿದ್ದರು. ಟಿವಿ9 ಕನ್ನಡ ವಾಹಿನಿಯು ಈ ಬಗ್ಗೆ ವಿಸ್ತೃತ ವರದಿ ಪ್ರಸಾರ ಮಾಡಿತ್ತು. ವರದಿ ಪ್ರಸಾರವಾದ ಬೆನ್ನಲ್ಲೇ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಗದಗ ನಗರದ ಸೂರ್ಯ ನಗರದಲ್ಲಿರುವ ಈ ಸರ್ಕಾರಿ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗದಗ, ಆಗಸ್ಟ್ 08: ಜಿಲ್ಲೆಯ ಸರ್ಕಾರಿ ಹಾಸ್ಟೆಲ್‌ನಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದ್ದು, ನೂರಾರು ಬಡ ವಿದ್ಯಾರ್ಥಿಗಳು ತೊಂದರೆಗೊಳಗಾಗಿದ್ದರು. ಟಿವಿ9 ಕನ್ನಡ ವಾಹಿನಿಯು ಈ ಬಗ್ಗೆ ವಿಸ್ತೃತ ವರದಿ ಪ್ರಸಾರ ಮಾಡಿತ್ತು. ವರದಿ ಪ್ರಸಾರವಾದ ಬೆನ್ನಲ್ಲೇ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಗದಗ ನಗರದ ಸೂರ್ಯ ನಗರದಲ್ಲಿರುವ ಈ ಸರ್ಕಾರಿ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ ಹಾಸ್ಟೆಲ್‌ನಲ್ಲಿ ಬೆಡ್‌ಗಳಲ್ಲಿ ತಿಗಣೆ ರಾಶಿ, ಧವಸ ಧಾನ್ಯದಲ್ಲಿ ಹುಳುಗಳ ಹಿಂಡು, ಕಿತ್ತುಹೋಗಿರುವ ಬೆಡ್ ಶೀಟ್‌ಗಳು, ಕಿಟಕಿಗಳಿಗೆ ಬಟ್ಟೆ ಹೊದಿಕೆ ಹಾಗೂ ಸುತ್ತಮುತ್ತ ಕಸದ ರಾಶಿ ಕಂಡುಬಂದಿತು. ಈ ಪರಿಸ್ಥಿತಿಯನ್ನು ಕಂಡು ಕೆಂಡಾಮಂಡಲರಾದ ನ್ಯಾಯಮೂರ್ತಿ ಫಣೀಂದ್ರ ಅವರು ಹಾಸ್ಟೆಲ್ ವಾರ್ಡನ್, ಸಮಾಜ ಕಲ್ಯಾಣ ಇಲಾಖೆಯ ಡಿಡಿ ನಂದಾ ಮತ್ತು ಇತರ ಅಧಿಕಾರಿಗಳಿಗೆ ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡರು. “ನಿಮ್ಮ ಮಕ್ಕಳನ್ನು ಇದೇ ಹಾಸ್ಟೆಲ್‌ನಲ್ಲಿ ಇರಿಸಿ” ಎಂದು ಕಿಡಿಕಾರಿದರು. ರಾಜ್ಯದಲ್ಲೇ ಅತ್ಯಂತ ಕೆಟ್ಟ ಹಾಸ್ಟೆಲ್ ಇದಾಗಿದೆ ಎಂದು ಹೇಳಿದ ಅವರು, ಕೂಡಲೇ ಉಪನಿರ್ದೇಶಕಿ, ತಾಲೂಕು ಅಧಿಕಾರಿ ಹಾಗೂ ವಾರ್ಡನ್ ಅವರನ್ನು ಎತ್ತಂಗಡಿ ಮಾಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆಯುವುದಾಗಿ ತಿಳಿಸಿದರು. ಅಧಿಕಾರಿಗಳ ನಿರ್ಲಕ್ಷ್ಯವೇ ಈ ಅವ್ಯವಸ್ಥೆಗೆ ಕಾರಣ ಎಂದು ಆರೋಪಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us