ದೇವಸ್ಥಾನ ನಿರ್ಮಾಣಕ್ಕೆ ಟೊಂಕ ಕಟ್ಟಿದ ಗೃಹಲಕ್ಷ್ಮಿಯರು: ಗ್ಯಾರಂಟಿ ಹಣ ದೇಣಿಗೆ ನೀಡಿದ ಮಹಿಳೆಯರು

Edited By:

Updated on: Feb 28, 2026 | 9:35 PM

ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದಲ್ಲಿ ಗೃಹಲಕ್ಷ್ಮಿ ಯೋಜನೆಯ 850 ಫಲಾನುಭವಿ ಮಹಿಳೆಯರು ವಿಶಿಷ್ಟ ಕಾರ್ಯ ಮಾಡಿದ್ದಾರೆ. ರೇಣುಕಾ ಯಲ್ಲಮ್ಮ ದೇವಾಲಯದ ನಿರ್ಮಾಣ ಕಾಮಗಾರಿಗೆ ತಮ್ಮ ಗೃಹಲಕ್ಷ್ಮಿ ಯೋಜನೆಯ ಮಾಸಿಕ ₹2000 ಹಣವನ್ನು ಸ್ವಯಂಪ್ರೇರಣೆಯಿಂದ ದೇಣಿಗೆ ನೀಡಿದ್ದಾರೆ. ಹಣಕಾಸಿನ ಕೊರತೆಯಿಂದ ನಿಂತಿದ್ದ ದೇವಾಲಯ ಕಾರ್ಯಕ್ಕೆ ಮಹಿಳೆಯರು ಆರ್ಥಿಕ ನೆರವು ಒದಗಿಸಿದ್ದಾರೆ.

ಗದಗ, ಫೆಬ್ರವರಿ 28: ಜಿಲ್ಲೆಯ ತಿಮ್ಮಾಪುರ ಗ್ರಾಮದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರು ಮಾದರಿ ಕಾರ್ಯ ಮಾಡಿದ್ದಾರೆ. ಗ್ರಾಮದ ಶ್ರೀ ರೇಣುಕಾ ಯಲ್ಲಮ್ಮ ದೇವಾಲಯದ ನಿರ್ಮಾಣ ಕಾಮಗಾರಿಗೆ ತಮ್ಮ ಗೃಹಲಕ್ಷ್ಮಿ ಯೋಜನೆಯ ಮಾಸಿಕ 2000 ರೂ ಹಣವನ್ನು ದೇಣಿಗೆಯಾಗಿ ನೀಡಿದ್ದಾರೆ. ಸುಮಾರು 850 ಮಹಿಳೆಯರು ಸ್ವಯಂಪ್ರೇರಣೆಯಿಂದ ಈ ದೇಣಿಗೆ ಸಂಗ್ರಹದಲ್ಲಿ ಭಾಗವಹಿಸಿದ್ದಾರೆ. ನಾಲ್ಕು ದಿನದಲ್ಲಿ 2 ಲಕ್ಷ 50 ಸಾವಿರ ರೂ ಸಂಗ್ರಹಿಸಿದ್ದಾರೆ. ದೇವಸ್ಥಾನದ ಕಟ್ಟಡ ಕಾಮಗಾರಿಯು ಹಣಕಾಸಿನ ತೊಂದರೆಯಿಂದ ಮೂರ್ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿತ್ತು. ಇದೀಗ, ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಳಸಿಕೊಂಡು ಕೆಲಸವನ್ನು ಪುನರಾರಂಭಿಸಲು ಮಹಿಳೆಯರು ನಿರ್ಧರಿಸಿದ್ದಾರೆ. ದೇವಾಲಯ ಸಂಪೂರ್ಣಗೊಳ್ಳುವವರೆಗೂ ಅಗತ್ಯಬಿದ್ದರೆ ಮತ್ತಷ್ಟು ದೇಣಿಗೆ ನೀಡುವುದಾಗಿ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More