ಹಳ್ಳದ ನೀರಿನಲ್ಲಿ ಸಿಲುಕಿದ ಕಾರು; ಗ್ರಾಮಸ್ಥರ ಸಮಯಪ್ರಜ್ಞೆಯಿಂದ ಬದುಕಿದ ನಾಲ್ವರು

Edited By:

Updated on: Sep 23, 2026 | 9:59 AM

ಗದಗ ಜಿಲ್ಲೆಯ ರೋಣ ತಾಲೂಕಿನಲ್ಲಿ ಸುರಿದ ಭಾರಿ ಮಳೆಯಿಂದ ನಾಗರಾಳ ಸಮೀಪದ ಹಳ್ಳವೊಂದು ಉಕ್ಕಿ ಹರಿಯುತ್ತಿತ್ತು. ನೀರಲಗಿ ಮತ್ತು ನಾಗರಾಳ ಗ್ರಾಮಗಳ ಮಧ್ಯೆ ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಕಾರು ಚಾಲಕ ದುಸ್ಸಾಹಸಕ್ಕೆ ಮುಂದಾಗಿದ್ದಾನೆ. ಹಳ್ಳದ ಮಧ್ಯೆ ಸಿಲುಕಿದ ಕಾರಿನಲ್ಲಿದ್ದ ನಾಲ್ವರು ಯುವಕರನ್ನು ಸ್ಥಳೀಯರು ಸಮಯಪ್ರಜ್ಞೆ ಮೆರೆದು ಅದ್ಭುತವಾಗಿ ರಕ್ಷಿಸಿದ್ದಾರೆ.

ಗದಗ, ಸೆ.22: ಜಿಲ್ಲೆಯ ಹಲವೆಡೆ ತಡರಾತ್ರಿ ಸುರಿದ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಅದರಲ್ಲೂ ರೋಣ ತಾಲೂಕಿನಲ್ಲಿ ಮಳೆ ಅಬ್ಬರಿಸಿದ್ದು, ಹಲವೆಡೆ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ. ಈ ಮಧ್ಯೆ, ನಾಗರಾಳ ಗ್ರಾಮದ ಬಳಿ ದುರಂತವೊಂದು ಸಂಭವಿಸುವ ಅಪಾಯದಿಂದ ಕೂದಲೆಳೆ ಅಂತರದಲ್ಲಿ ತಪ್ಪಿಹೋಗಿದೆ. ನೀರಲಗಿ ಮತ್ತು ನಾಗರಾಳ ಗ್ರಾಮಗಳ ಮಧ್ಯದಲ್ಲಿ ಹರಿಯುವ ಹಳ್ಳವು ಭಾರಿ ಮಳೆಯಿಂದಾಗಿ ತುಂಬಿ ಉಕ್ಕಿ ಹರಿಯುತ್ತಿತ್ತು. ಅಪಾಯದ ಅರಿವಿದ್ದರೂ, ಕಾರು ಚಾಲಕನೊಬ್ಬ ತನ್ನ ವಾಹನದೊಂದಿಗೆ ಹಳ್ಳವನ್ನು ದಾಟಲು ಮುಂದಾಗಿದ್ದಾನೆ. ಹಳ್ಳದ ಮಧ್ಯ ಭಾಗದಲ್ಲಿ ನೀರಿನ ರಭಸಕ್ಕೆ ಸಿಲುಕಿದ ಕಾರು ಮುಂದೆ ಸಾಗಲಾಗದೆ ಅಲ್ಲೇ ನಿಂತಿದೆ. ಕಾರಿನಲ್ಲಿದ್ದ ನಾಲ್ವರು ಯುವಕರು ಜೀವ ಉಳಿಸಿಕೊಳ್ಳಲು ಪರದಾಡಿದ್ದಾರೆ. ಸ್ಥಳೀಯರು ಕೂಡಲೇ ಕಾರ್ಯಪ್ರವೃತ್ತರಾಗಿ, ಕಾರಿನಲ್ಲಿದ್ದ ಯುವಕರನ್ನು ರಕ್ಷಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಬೈಕ್ ಲೈಟ್‌ಗಳ ಸಹಾಯದಿಂದ ಮತ್ತು ಸ್ಥಳೀಯರ ಕೂಗುಗಳೊಂದಿಗೆ, ಕಾರನ್ನು ಮುಂದಕ್ಕೆ ತಳ್ಳಲು ಪ್ರಯತ್ನಿಸಿದ್ದಾರೆ. ಕೊನೆಗೆ, ಎಲ್ಲರ ಒಗ್ಗಟ್ಟಿನ ಪ್ರಯತ್ನದಿಂದ ನಾಲ್ವರನ್ನೂ ಯಶಸ್ವಿಯಾಗಿ ರಕ್ಷಿಸಲಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More