60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು: ಅದೇ ಬೆಂಕಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ರೈತ

Edited By:

Updated on: Jan 02, 2026 | 4:20 PM

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿಯಲ್ಲಿ ದುಷ್ಕರ್ಮಿಗಳು ಸುಮಾರು 60 ಲಕ್ಷ ರೂ ಮೌಲ್ಯದ 100 ಎಕರೆ ಮೆಕ್ಕೆಜೋಳ ಬೆಳೆ ರಾಶಿಗೆ ಡಿಸೇಲ್, ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದಾರೆ. ಸಾಲ ಮಾಡಿ ಬೆಳೆದಿದ್ದ ಬೆಳೆ ನಾಶವಾಗಿ ರೈತ ಕುಟುಂಬದವರು ಆತ್ಮಹತ್ಯೆಗೆ ಯತ್ನಿಸಿದ್ದು, ಗ್ರಾಮಸ್ಥರು ರಕ್ಷಿಸಿದ್ದಾರೆ.

ಗದಗ, ಜನವರಿ 02: ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ಗ್ರಾಮದಲ್ಲಿ ಸುಮಾರು 60 ಲಕ್ಷ ಮೌಲ್ಯದ ಮೆಕ್ಕೆಜೋಳ ಬೆಂಕಿಗೆ ಆಹುತಿ ಆಗಿದೆ. ಗಣೇಶ ಹಾಗೂ ಗೋಪಿ ಚವ್ಹಾಣ ಸಹೋದರರು ಸುಮಾರು 100 ಎಕರೆ ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆದಿದ್ದರು. ಡೀಸೆಲ್ ಹಾಗೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ನಾಲ್ಕು ಜನರಿಂದ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಸುಟ್ಟು ಹೋಗುತ್ತಿದ್ದ ಮೆಕ್ಕೆಜೋಳಕ್ಕೆ ಮಕ್ಕಳ‌ ಸಮೇತ ರೈತ ಕುಟುಂಬ ಜಿಗಿದು ಆತ್ಮಹತ್ಯೆಗೆ ಯತ್ನಿಸಿದೆ. ಸ್ಥಳದಲ್ಲಿದ್ದ ಗ್ರಾಮಸ್ಥರು ರೈತ ಕುಟುಂಬವನ್ನು ರಕ್ಷಣೆ ಮಾಡಿದ್ದಾರೆ. ಕಣ್ಮುಂದೆ ಸುಟ್ಟು ಕರಕಲಾದ ಮೆಕ್ಕೆಜೋಳವನ್ನು ನೋಡಿ ರೈತ ಕಣ್ಣೀರು ಹಾಕಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Jan 02, 2026 04:18 PM