ಕ್ರಿಕೆಟ್ ಆಡುತ್ತಿದ್ದವರಿಗೆ ಕ್ವಾಟ್ಲೆ ಕೊಟ್ಟ ಮಂಗ: ದಿಕ್ಕಾಪಾಲಾಗಿ ಓಡಿದ ಯುವಕರು

Edited By:

Updated on: Sep 05, 2025 | 9:24 AM

ಗದಗದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದ ಯುವಕರಿಗೆ ಮಂಗವೊಂದು ಕ್ವಾಟ್ಲೆ ಕೊಟ್ಟಿದೆ. ಮಂಗನ ಕಾಟಕ್ಕೆ ಯುವಕರು ದಿಕ್ಕಾಪಾಲಾಗಿ ಓಡಿದ್ದಾರೆ. ಕೊನೆಗೆ ಯುವಕರು ಬ್ಯಾಟ್‌ನಿಂದ ಮಂಗವನ್ನು ಹೆದರಿಸಿ ಅಲ್ಲಿಂದ ಓಡಿಸಿದ್ದಾರೆ. ಮಂಗನಾಟಕ್ಕೆ ಕೆಲ ಯುವಕರು ಬಿದ್ದು ಬಿದ್ದು ನಕ್ಕಿದ್ದಾರೆ. ವಿಡಿಯೋ ನೋಡಿ.

ಗದಗ, ಸೆಪ್ಟೆಂಬರ್​ 05: ಮಂಗನಾಟಕ್ಕೆ (Monkey) ಕ್ರಿಕೆಟ್ ಆಡುತ್ತಿದ್ದ ಯುವಕರು ದಿಕ್ಕಾಪಾಲಾಗಿರುವಂತಹ ಘಟನೆಯೊಂದು ನಗರದ ಮುನ್ಸಿಪಲ್ ಕಾಲೇಜ್ ಮೈದಾನದಲ್ಲಿ ನಡೆದಿದೆ. ಯುವಕರು ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಪ್ರತ್ಯೇಕ್ಷವಾದ ಮಂಗ ಯುವಕರಿಗೆ ಕ್ರಿಕೆಟ್ ಆಡಲು ಬಿಟ್ಟಿಲ್ಲ. ಮೈದಾನದ ತುಂಬೆಲ್ಲಾ ಅಟ್ಟಾಡಿಸಿದೆ. ಯುವಕರು ರಕ್ಷಣೆಗಾಗಿ ಕಲ್ಲು ಹಿಡಿದು ನಿಂತ್ತಿದ್ದರು. ಬಳಿಕ ಹೆದರಿಸಿ ಮಂಗನನ್ನು ಅಲ್ಲಿಂದ ಓಡಿಸಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More