ಅಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು, ಇಲ್ಲಂದ್ರೆ ನಾನೇ ಕೊಲೆ ಮಾಡ್ತೀನಿ ಎಂದ ತಾಯಿಗೆ ತಕ್ಕಮಗ

Edited By:

Updated on: Oct 08, 2025 | 10:38 PM

ಗದಗ ತಾಲೂಕಿನ ಬಿಂಕದಕಟ್ಟಿಯಲ್ಲಿ ಕೆಎಸ್‌ಆರ್‌ಟಿಸಿ ಕಂಡಕ್ಟರ್ ರಮೇಶ್ ನರಗುಂದ ತನ್ನ ಪತ್ನಿ ಯಲ್ಲಮ್ಮ ಅಲಿಯಾಸ್ ಸ್ವಾತಿಯನ್ನು ಹತ್ಯೆ ಮಾಡಿದ್ದಾನೆ. ತಂದೆಗೆ ಮೂರು ವರ್ಷಗಳಿಂದ ಮಾನಸಿಕ ಸಮಸ್ಯೆ, ಭ್ರಮೆ ಇತ್ತು ಎಂದು ಮಗ ಬುದ್ಧಪ್ಪ ಹೇಳಿದ್ದಾನೆ. ತಾಯಿ ಪತಿವ್ರತೆ, ತಂದೆಗೆ ಜೀವಾವಧಿ ಶಿಕ್ಷೆ ಆಗಬೇಕು ಎಂದಿದ್ದಾನೆ.

ಗದಗ, ಅಕ್ಟೋಬರ್​ 08: ಚಾಕುವಿನಿಂದ ಇರಿದು ಪತ್ನಿಯನ್ನು ಪತಿ ಹತ್ಯೆಗೈದಿರುವಂತಹ ಘಟನೆ ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ನಡೆದಿದೆ. ಘಟನೆ ಬಗ್ಗೆ ಮಗ ಮಾತನಾಡಿದ್ದು, ತಂದೆಗೆ ಜೀವಾವಧಿ ಶಿಕ್ಷೆ ಆಗಬೇಕು. ಇಲ್ಲಾಂದರೆ ತಾನೇ ಕೊಲೆ ಮಾಡುವುದಾಗಿ ಹೇಳಿದ್ದಾನೆ. ನನ್ನ ತಾಯಿ ಪತಿವ್ರತೆ. ತಂದೆಗೆ ಕಠಿಣ ಶಿಕ್ಷೆ ಆಗಬೇಕು ಎಂದು ಹೇಳಿದ್ದಾನೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More