ಗದಗ ಮುಂಡರಗಿ: ನೀರು ಪೈಪ್‌ನ ರಬ್ಬರ್​ ಕಿತ್ತು ಹೋಗಿ ನೀರು ಪೋಲು, ರೈತರ ಪರದಾಟ

Edited By: ಸಾಧು ಶ್ರೀನಾಥ್​

Updated on: Oct 11, 2023 | 2:55 PM

ಗದಗ ಜಿಲ್ಲೆಯ ಮುಂಡರಗಿ (Gadag Mundaragi) ಹಾಗೂ ಬರದೂರು ಮಧ್ಯೆ ಅಪಾರ ಪ್ರಮಾಣದ ಕುಡಿಯುವ ನೀರು (drinking water) ಪೋಲಾಗುತ್ತಿದೆ. ಗದಗ ಬೆಟಗೇರಿ ಅವಳಿ ನಗರಕ್ಕೆ ಸರಬರಾಜು ಆಗುವ ನೀರು ಹೀಗೆ ಪೋಲಾಗುತ್ತಿದೆ.

ಗದಗ ಜಿಲ್ಲೆಯ ಮುಂಡರಗಿ (Gadag Mundaragi) ಹಾಗೂ ಬರದೂರು ಮಧ್ಯೆ ಅಪಾರ ಪ್ರಮಾಣದ ಕುಡಿಯುವ ನೀರು (drinking water) ಪೋಲಾಗುತ್ತಿದೆ. ಗದಗ ಬೆಟಗೇರಿ ಅವಳಿ ನಗರಕ್ಕೆ ಸರಬರಾಜು ಆಗುವ ನೀರು ಹೀಗೆ ಪೋಲಾಗುತ್ತಿದೆ. ಪೈಪ್‌ನ ಏರ್ ವಾಲ್ವ್​​ ರಬ್ಬರ್​ ವೈಸರ್ ಕಿತ್ತು ಹೋಗಿ ನೀರು ಪೋಲಾಗುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಸಿಂಗಟಾಲೂರು ಬ್ಯಾರೇಜ್‌ನಿಂದ ಗದಗ ನಗರಕ್ಕೆ ಬರುವ ನೀರು ಇದಾಗಿದೆ. ಇದರ ಫಲವಾಗಿ ಅಪಾರ ಪ್ರಮಾಣದಲ್ಲಿ ನೀರು ತಮ್ಮ ಜಮೀನಿನಲ್ಲಿ ಶೇಖರಣೆಗೊಳ್ಳುತ್ತಿದ್ದು, ದುರಸ್ಥಿ ಮಾಡಿಕೊಡುವಂತೆ ರೈತರು (farmers) ಒತ್ತಾಯಿಸಿದ್ದಾರೆ.

Also Read: ದಿನೇ ದಿನೇ ಖಾಲಿಯಾಗುತ್ತಿದೆ ಹೇಮಾವತಿ ಒಡಲು, ಕುಡಿಯುವ ನೀರಿಗೆ ಹಾಹಾಕಾರ ಸೃಷ್ಟಿಯಾಗುವ ಆತಂಕ

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More