ಚಿಲ್ಲರೆ ಇಲ್ಲ ಎಂದಿದಕ್ಕೆ ಗಲಾಟೆ: ಪೆಟ್ರೋಲ್ ಬಂಕ್ಗೆ ನುಗ್ಗಿ ಸಿಬ್ಬಂದಿಗೆ ಥಳಿಸಿದ ಯುವಕರು
ಗದಗ ತಾಲ್ಲೂಕಿನ ಹರ್ತಿ ಗ್ರಾಮದ ಬಳಿ ಪೆಟ್ರೋಲ್ ಬಂಕ್ನಲ್ಲಿ ಚಿಲ್ಲರೆ ಇಲ್ಲ ಎಂದಿದ್ದಕ್ಕೆ ಯುವಕರ ಗುಂಪು ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ನಡೆದಿದೆ. ಘಟನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಲ್ಲೆಗೊಳಗಾದ ಸಿಬ್ಬಂದಿಗೆ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಗದಗ, ನವೆಂಬರ್ 18: ಚಿಲ್ಲರೆ ಇಲ್ಲ ಎಂದಿದ್ದಕ್ಕೆ ಪೆಟ್ರೋಲ್ ಬಂಕ್ಗೆ ನುಗ್ಗಿ ಸಿಬ್ಬಂದಿ ಮೇಲೆ ಯುವಕರಿಂದ ಹಲ್ಲೆ (Attack) ಮಾಡಿರುವಂತಹ ಘಟನೆ ಗದಗ ತಾಲೂಕಿನ ಹರ್ತಿ ಗ್ರಾಮದ ಬಳಿ ನಡೆದಿದೆ. ಪೆಟ್ರೋಲ್ ಹಾಕಿಸಲು ಬಂದಿದ್ದ ಯುವಕರ ಗುಂಪಿನಿಂದ ಹಲ್ಲೆ ಮಾಡಲಾಗಿದ್ದು, ಹಲ್ಲೆ ನಡೆಸುತ್ತಿದ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಹಲ್ಲೆಗೊಳಗಾದ ಬಂಕ್ ಸಿಬ್ಬಂದಿಗೆ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos