ಗದಗ: ಶಾಲೆ ಆರಂಭದ ದಿನವೇ ಶಾಲಾ ವಾಹನ ಪಲ್ಟಿ, ತಪ್ಪಿದ ದುರಂತ
ಶಾಲೆ ಆರಂಭದ ದಿನವೇ ಗದಗದ R.K. ನಗರದ ಬಳಿ ಶ್ರೀಪಾರ್ಶ್ವನಾಥ ಆಂಗ್ಲ ಮಾಧ್ಯಮ ಶಾಲೆಯ ಬಸ್ ಪಲ್ಟಿಯಾಗಿದೆ. ಮಿನಿ ಕ್ಯಾಂಟರ್ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಬಸ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗದಗ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಗದಗ, ಮೇ 29: ಶಾಲೆ ಆರಂಭದ ದಿನವೇ ಶಾಲಾ ವಾಹನ (School Bus) ಪಲ್ಟಿಯಾಗಿರುವಂತಹ ಘಟನೆ ನಗರದ R.K.ನಗರ ಬಳಿಯ ಅಂಡರ್ಪಾಸ್ನಲ್ಲಿ ನಡೆದಿದೆ. ವಿದ್ಯಾರ್ಥಿಗಳನ್ನು ಕರೆತರಲು ಹೊರಟಿದ್ದಾಗ ಘಟನೆ ಸಂಭವಿಸಿದ್ದು, ಹೀಗಾಗಿ ಭಾರೀ ಅನಾಹುತ ತಪ್ಪಿದೆ. ಶ್ರೀಪಾರ್ಶ್ವನಾಥ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸ್ಕೂಲ್ ಬಸ್ಗೆ ಮಿನಿ ಕ್ಯಾಂಟರ್ ಡಿಕ್ಕಿಯಾಗಿ ಪಲ್ಟಿ ಹೊಡೆದಿದೆ. ಶಾಲಾ ಬಸ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಗದಗ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.