ಮಹಾಶಿವರಾತ್ರಿ ಸಂಭ್ರಮದ ಮಧ್ಯೆ ಶಿವಲಿಂಗ ಮೂರ್ತಿ ಭಗ್ನ: ರೊಚ್ಚಿಗೆದ್ದ ಗ್ರಾಮಸ್ಥರು
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಶಿಂಗಟಾಲೂರು ಗ್ರಾಮದ ರಾಮಲಿಂಗೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ದಿನದಂದೇ ಶಿವಲಿಂಗ, ಪಾಣಿಪೀಠ ಹಾಗೂ ನಂದಿ ವಿಗ್ರಹ ಭಗ್ನಗೊಳಿಸಲಾಗಿದೆ. ತುಂಗಭದ್ರಾ ನದಿ ದಡದಲ್ಲಿರುವ ಚಾಲುಕ್ಯರ ಕಾಲದ ಈ ದೇವಾಲಯದಲ್ಲಿನ ಕೃತ್ಯಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದುಷ್ಕರ್ಮಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ದಾರೆ.
ಗದಗ, ಫೆಬ್ರವರಿ 15: ಜಿಲ್ಲೆಯ ಮುಂಡರಗಿ ತಾಲೂಕಿನ ಸಿಂಗಟಾಲೂರು ಗ್ರಾಮದಲ್ಲಿ ಮಹಾಶಿವರಾತ್ರಿ ಹಬ್ಬದಂದೇ ಅಹಿತಕರ ಘಟನೆವೊಂದು ನಡೆದಿದೆ. ತುಂಗಭದ್ರಾ ನದಿ ದಡದಲ್ಲಿರುವ ಐತಿಹಾಸಿಕ ರಾಮಲಿಂಗೇಶ್ವರ ದೇವಾಲಯದಲ್ಲಿನ ಶಿವಲಿಂಗ, ಅದರ ಪಾಣಿಪೀಠ ಮತ್ತು ನಂದಿ ವಿಗ್ರಹವನ್ನು ದುಷ್ಕರ್ಮಿಗಳು ಭಗ್ನಗೊಳಿಸಿದ್ದಾರೆ. ಅಹೋರಾತ್ರಿ ಘಟನೆ ನಡೆದಿದೆ. ದೇಶಾದ್ಯಂತ ಶಿವರಾತ್ರಿಯನ್ನು ಭಕ್ತಿ ಭಾವದಿಂದ ಆಚರಿಸುತ್ತಿರುವಾಗ ಈ ರೀತಿಯ ಘಟನೆ ನಡೆದಿರುವುದು ಭಕ್ತರಲ್ಲಿ ತೀವ್ರ ನೋವುಂಟು ಮಾಡಿದೆ. ಸದ್ಯ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು ಆರೋಪಿಗಳನ್ನು ಬಂಧಿಸದಿದ್ದರೆ ಡಿಸಿ ಕಚೇರಿ ಬಳಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
Latest Videos
ರಣಜಿ ಟ್ರೋಫಿ ಸೆಮಿಫೈನಲ್; ಸತತ 2ನೇ ಶತಕ ಸಿಡಿಸಿದ ರಾಹುಲ್
ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ರಿಷಬ್ ಶೆಟ್ಟಿ; ವಿಡಿಯೋ
ಗಂಡನ ಸ್ನೇಹಿತನ ಮನೇಲಿ ಸಿಕ್ಕಿಬಿದ್ದ ಆಂಟಿ: ಶಾಕಿಂಗ್ ಕಾರಣ ಬಿಚ್ಚಿಟ್ಟ SP
ಏಕಪತ್ನಿ ವ್ರತಸ್ಥನಂತೆ ಪೋಸ್ ಕೊಟ್ಟವ ಸಿಕ್ಕಿಬಿದ್ದಿದ್ದು ಮತ್ತೊಬ್ಬಳ ಜೊತೆ
