ತೋಂಟದಾರ್ಯ ಮಠದ ಜಾತ್ರೆಯಲ್ಲಿ ಅವಘಡ: ಕಳಚಿ ಬಿದ್ದ ಜೋಕಾಲಿ, 20ಕ್ಕೂ ಹೆಚ್ಚು ಜನರಿಗೆ ಗಾಯ

Edited By:

Updated on: May 03, 2026 | 10:29 PM

ಗದಗ ತೋಂಟದಾರ್ಯ ಮಠದ ಜಾತ್ರೆಯಲ್ಲಿ ಬ್ರೇಕ್‌ಡ್ಯಾನ್ಸ್ ವ್ಹೀಲ್ ಮುರಿದು ದೊಡ್ಡ ದುರಂತ ಸಂಭವಿಸಿದೆ. ಕಳಪೆ ಗುಣಮಟ್ಟದ ಆಟಿಕೆಯಿಂದಾಗಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮಕ್ಕಳು, ಮಹಿಳೆಯರು, ಪುರುಷರು ಸೇರಿ ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಶಹರ ಪೊಲೀಸರು ಭೇಟಿ ನೀಡಿದ್ದಾರೆ.

ಗದಗ, ಮೇ 03: ತೋಂಟದಾರ್ಯ ಮಠದ ಜಾತ್ರೆಯಲ್ಲಿ ಭೀಕರ ಅವಘಡವೊಂದು ಸಂಭವಿಸಿದೆ. ಡ್ಯಾನ್ಸಿಂಗ್ ಫ್ಲೈ ಜೋಕಾಲಿಯ 20ಕ್ಕೂ ಹೆಚ್ಚು ತೊಟ್ಟಿಲುಗಳು ಏಕಾಏಕಿ ಕಳಚಿ ಬಿದ್ದಿದ್ದು, ಬ್ರೇಕ್​ಡ್ಯಾನ್ಸ್ ಆಡುತ್ತಿದ್ದ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಮಕ್ಕಳು, ಮಹಿಳೆಯರು ಮತ್ತು ಪುರುಷರಿಗೆ ಗಂಭೀರ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಸದ್ಯ ಗಾಯಾಳುಗಳನ್ನ ಗದಗದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆಪೆ ಗುಣಮಟ್ಟದ ಬ್ರೇಕ್​ಡ್ಯಾನ್ಸ್ ಅಳವಡಿಕೆ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ಗದಗ ಶಹರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Follow Us
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More