ಸ್ಮಶಾನವಿಲ್ಲದೆ ನಡುರಸ್ತೆಯಲ್ಲೇ ಶವಸಂಸ್ಕಾರಕ್ಕೆ ಮುಂದಾದ ಗ್ರಾಮಸ್ಥರು!

Edited By:

Updated on: Jul 15, 2026 | 10:22 AM

ಜಿಲ್ಲೆಯ ಗದಗ ತಾಲೂಕಿನ ಕಣವಿ ಹೊಸೂರು ಗ್ರಾಮದಲ್ಲಿ ಸ್ಮಶಾನವಿಲ್ಲದ ಕಾರಣ, ಮೃತ ಮಹಿಳೆಯ ಅಂತ್ಯಸಂಸ್ಕಾರವನ್ನು ನಡುರಸ್ತೆಯಲ್ಲೇ ಮಾಡಲು ಗ್ರಾಮಸ್ಥರು ಸಿದ್ಧತೆ ನಡೆಸಿ ಆಕ್ರೋಶ ಹೊರಹಾಕಿದ ಘಟನೆ ನಡೆದಿದೆ. ಅನಾರೋಗ್ಯದಿಂದ ಮೃತಪಟ್ಟ ಬಸವಣ್ಣೆಮ್ಮ (46) ಎಂಬುವವರ ಶವಸಂಸ್ಕಾರಕ್ಕೆ ಜಾಗವಿಲ್ಲದೆ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿಯವರೆಗೆ ರೈತರೊಬ್ಬರ ಜಮೀನಿನಲ್ಲಿ ಅಂತ್ಯಸಂಸ್ಕಾರ ಮಾಡಲಾಗುತ್ತಿತ್ತು. ಆದರೆ, ಈಗ ಜಮೀನಿನ ಮಾಲೀಕರು ಅದಕ್ಕೆ ನಿರಾಕರಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಗ್ರಾಮದ ಮಧ್ಯಭಾಗದ ರಸ್ತೆಯಲ್ಲೇ ಕಟ್ಟಿಗೆ ಜೋಡಿಸಿ ಅಂತ್ಯಕ್ರಿಯೆಗೆ ಮುಂದಾಗಿದ್ದಾರೆ.

ಗದಗ, ಜುಲೈ 15: ಜಿಲ್ಲೆಯ ಗದಗ ತಾಲೂಕಿನ ಕಣವಿ ಹೊಸೂರು ಗ್ರಾಮದಲ್ಲಿ ಸ್ಮಶಾನವಿಲ್ಲದ ಕಾರಣ, ಮೃತ ಮಹಿಳೆಯ ಅಂತ್ಯಸಂಸ್ಕಾರವನ್ನು ನಡುರಸ್ತೆಯಲ್ಲೇ ಮಾಡಲು ಗ್ರಾಮಸ್ಥರು ಸಿದ್ಧತೆ ನಡೆಸಿ ಆಕ್ರೋಶ ಹೊರಹಾಕಿದ ಘಟನೆ ನಡೆದಿದೆ. ಅನಾರೋಗ್ಯದಿಂದ ಮೃತಪಟ್ಟ ಬಸವಣ್ಣೆಮ್ಮ (46) ಎಂಬುವವರ ಶವಸಂಸ್ಕಾರಕ್ಕೆ ಜಾಗವಿಲ್ಲದೆ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿಯವರೆಗೆ ರೈತರೊಬ್ಬರ ಜಮೀನಿನಲ್ಲಿ ಅಂತ್ಯಸಂಸ್ಕಾರ ಮಾಡಲಾಗುತ್ತಿತ್ತು. ಆದರೆ, ಈಗ ಜಮೀನಿನ ಮಾಲೀಕರು ಅದಕ್ಕೆ ನಿರಾಕರಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಗ್ರಾಮದ ಮಧ್ಯಭಾಗದ ರಸ್ತೆಯಲ್ಲೇ ಕಟ್ಟಿಗೆ ಜೋಡಿಸಿ ಅಂತ್ಯಕ್ರಿಯೆಗೆ ಮುಂದಾಗಿದ್ದಾರೆ.

ಕ್ಷೇತ್ರದ ಶಾಸಕ ಎಚ್.ಕೆ. ಪಾಟೀಲ್ ಹಾಗೂ ತಹಶೀಲ್ದಾರರಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕಿಡಿಕಾರಿದ ಜನ, ಜಿಲ್ಲಾಡಳಿತ ತಕ್ಷಣವೇ ಸ್ಮಶಾನಕ್ಕೆ ಜಾಗ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More