ಗದಗ: ಕಳ್ಳ ಎಂದು ಯುವಕನನ್ನು ಅಟ್ಟಾಡಿಸಿದ ಗ್ರಾಮಸ್ಥರು, ಭಯದಿಂದ ತೆಂಗಿನ ಮರವೇರಿ ಕುಳಿತ ಯುವಕ!
ಗದಗ ಜಿಲ್ಲೆಯ ವಿವೇಕಾನಂದ ನಗರದಲ್ಲಿ ಬೆಳ್ಳಂಬೆಳಗ್ಗೆ ನಡೆದ ಹೈಡ್ರಾಮಾದಲ್ಲಿ ಬಸವರಾಜ್ ಸೊಲ್ಲಾಪುರ ಎಂಬ ಯುವಕ, ಗ್ರಾಮಸ್ಥರು ಮತ್ತು ಪೊಲೀಸರಿಂದ ತಪ್ಪಿಸಿಕೊಳ್ಳಲು 30-40 ಅಡಿ ಎತ್ತರದ ತೆಂಗಿನ ಮರವೇರಿದ್ದಾನೆ. ನಾಲ್ಕು ಗಂಟೆಗೂ ಹೆಚ್ಚು ಕಾಲ ಮರದಲ್ಲೇ ಕಳೆದ ಆತನನ್ನು ಅಗ್ನಿಶಾಮಕ ದಳ ಮತ್ತು ಪೊಲೀಸರು ರಕ್ಷಿಸಿ ವಶಕ್ಕೆ ಪಡೆದರು.
ಗದಗ, ಅಕ್ಟೋಬರ್ 28: ಗದಗ ಜಿಲ್ಲೆಯ ವಿವೇಕಾನಂದ ನಗರ ಬಡಾವಣೆಯಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಹೈಡ್ರಾಮಾ ನಡೆದಿದೆ. ಕಳ್ಳತನದ ಆರೋಪದ ಮೇಲೆ ಗ್ರಾಮಸ್ಥರು ಬೆನ್ನಟ್ಟಿದಾಗ, ಬಸವರಾಜ್ ಸೊಲ್ಲಾಪುರ ಎಂಬ ಯುವಕ ಸುಮಾರು 30-40 ಅಡಿ ಎತ್ತರದ ತೆಂಗಿನ ಮರವನ್ನು ಏರಿ ಕುಳಿತಿದ್ದಾನೆ. ಈ ಘಟನೆ ಮಂಗಳವಾರ ನಸುಕಿನ ಜಾವ 3 ರಿಂದ 3:30ರ ಸುಮಾರಿಗೆ ನಡೆದಿದೆ. ಮೂಲತಃ ಬೆಳಗಾವಿ ಜಿಲ್ಲೆಯ ಕಬ್ಬೂರು ಗ್ರಾಮದ ನಿವಾಸಿಯಾಗಿರುವ ಬಸವರಾಜ್, ನಸುಕಿನ ಜಾವ ಬಡಾವಣೆಯ ಮನೆ ಬಾಗಿಲು ಬಡಿದಿದ್ದಾನೆ ಎನ್ನಲಾಗಿದೆ. ಇದರಿಂದ ಭಯಗೊಂಡ ಸ್ಥಳೀಯರು ಆತನನ್ನು ಕಳ್ಳ ಎಂದು ಶಂಕಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿದಾಗ ಅವರ ಸೈರನ್ ಶಬ್ದ ಕೇಳಿ ಭಯಗೊಂಡ ಬಸವರಾಜ್, ತಪ್ಪಿಸಿಕೊಳ್ಳಲು ತೆಂಗಿನ ಮರ ಏರಿದ್ದಾನೆ. ನಾಲ್ಕು ಗಂಟೆಗೂ ಹೆಚ್ಚು ಕಾಲ ಮರದಲ್ಲೇ ಕಳೆದ ಯುವಕನನ್ನು, ಬಳಿಕ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸರು ಮತ್ತು ಸ್ಥಳೀಯರ ಸಹಾಯದಿಂದ ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ನಂತರ ಆತನನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
