ಮೃತ ಅಭಿಮಾನಿ ನವೀನ್​​ ಫ್ಯಾಮಿಲಿಗೆ ನಟ ಯಶ್​ ಹೇಳಿದ್ದೇನು?

Edited By:

Updated on: Jan 08, 2024 | 8:54 PM

ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮಕ್ಕೆ ಇಂದು ಭೇಟಿ ನೀಡಿದ ನಟ ಯಶ್​ ಮೂವರು ಅಭಿಮಾನಿಗಳ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಮೃತ ನವೀನ್ ಅವರ ಕುಟುಂಬಸ್ಥರೊಂದಿಗೆ ಮಾತನಾಡಿರುವ ನಟ ಯಶ್​, ‘ನಮಗೂ ಕೂಡ ಘಟನೆಯ ಬಗ್ಗೆ ದುಃಖವಿದೆ. ನಮ್ಮ ಮನೆಯಲ್ಲಿ ಒಬ್ಬನೆಂದು ಭಾವಿಸುತ್ತೇವೆ. ಅವರ ಹುಚ್ಚು ಪ್ರೀತಿ ಹೀಗೆ ಮಾಡಿಸಿದೆ’ ಎಂದಿದ್ದಾರೆ. 

ಗದಗ, ಜನವರಿ 08: ಪ್ಯಾನ್‌ ಇಂಡಿಯಾ ನಾಯಕ ನಟ, ಸ್ಯಾಂಡಲ್‌ವುಡ್‌ ರಾಕಿಂಗ್ ಸ್ಟಾರ್​ ಯಶ್ (Yash) ​ ಅವರು ಇಂದು 38 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಸ್ಟಾರ್‌ ಜನ್ಮದಿನ ಸಂಭ್ರಮದಲ್ಲಿ ಇರುವಾಗಲೇ ಘೋರವೇ ನಡೆದು ಹೋಗಿದೆ. ಮೂವರು ಅಭಿಮಾನಿಗಳು ದುರಂತ ಅಂತ್ಯ ಕಂಡಿದ್ದಾರೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮಕ್ಕೆ ಇಂದು ಭೇಟಿ ನೀಡಿದ ನಟ ಯಶ್​ ಮೂವರು ಅಭಿಮಾನಿಗಳ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಮೃತ ನವೀನ್ ಅವರ ಕುಟುಂಬಸ್ಥರೊಂದಿಗೆ ಮಾತನಾಡಿರುವ ನಟ ಯಶ್​, ‘ನಮಗೂ ಕೂಡ ಘಟನೆಯ ಬಗ್ಗೆ ದುಃಖವಿದೆ. ನಮ್ಮ ಮನೆಯಲ್ಲಿ ಒಬ್ಬನೆಂದು ಭಾವಿಸುತ್ತೇವೆ. ಅವರ ಹುಚ್ಚು ಪ್ರೀತಿ ಹೀಗೆ ಮಾಡಿಸಿದೆ’ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More