ಯುವತಿಯರಿಗೆ ಲಾಠಿ ತರಬೇತಿ: ಹುಡುಗಿಯರಿಗೆ ಚುಡಾಯಿಸಿದ್ರೆ ಹುಷಾರ್!

Edited By:

Updated on: Nov 03, 2025 | 9:24 PM

ಗದಗ ನಗರದಲ್ಲಿ ಯುವತಿಯರು ಮತ್ತು ಮಹಿಳೆಯರಿಗಾಗಿ ಲಾಠಿ ಶೌರ್ಯ ತರಬೇತಿಯನ್ನು ಆಯೋಜಿಸಲಾಗಿದೆ. ಹಿಂದೂ ಸಂಘಟನೆಗಳು ನಡೆಸುತ್ತಿರುವ ಈ ಉಚಿತ ತರಬೇತಿ, ಕಿಡಿಗೇಡಿಗಳ ಚುಡಾಯಿಸುವಿಕೆ, ದೌರ್ಜನ್ಯ ಮತ್ತು ಅತ್ಯಾಚಾರದಂತಹ ಪ್ರಕರಣಗಳನ್ನು ತಡೆಗಟ್ಟುವ ಗುರಿ ಹೊಂದಿದೆ. ಇದು ಮಹಿಳೆಯರಲ್ಲಿ ಆತ್ಮಸ್ಥೈರ್ಯ ಹೆಚ್ಚಿಸಿ, ಸ್ವರಕ್ಷಣೆಗಾಗಿ ಅವರನ್ನು ಸಜ್ಜುಗೊಳಿಸುತ್ತದೆ.

ಗದಗ, ನವೆಂಬರ್​ 03: ರಾಜ್ಯದಲ್ಲಿ ಮೊದಲ ಬಾರಿಗೆ ಯುವತಿಯರು ಮತ್ತು ಮಹಿಳೆಯರಿಗಾಗಿ ನಗರದ ತ್ರೀಕೂಟೇಶ್ವರ ದೇವಸ್ಥಾನ ಆವರಣದಲ್ಲಿ ಲಾಠಿ ಶೌರ್ಯ ತರಬೇತಿ ಆಯೋಜಿಸಲಾಗಿತ್ತು. ಕ್ರಾಂತಿ ಸೇನಾ, ಹಿಂದೂ ಜನ ಜಾಗೃತಿ, ರಾಜರಾಜೇಶ್ವರಿ ಮಹಿಳಾ ಮಂಡಳದಿಂದ ಆಯೋಜಿಸಿದ್ದ ಈ ತರಬೇತಿಯಲ್ಲಿ ನೂರಾರು ಯುವತಿಯರು, ಮಹಿಳೆಯರು ಭಾಗಿ ಆಗಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More