Lakkundi Gold Tressure: 8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ! ಉತ್ಖನನಕ್ಕೆ ಜನರ ಕಿರಿಕಿರಿ!
ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯ (Lakkundi Excavation) ಎಂಟನೇ ದಿನಕ್ಕೆ ಕಾಲಿಟ್ಟಿದೆ. ಕೋಟೆ ವೀರಭದ್ರೇಶ್ವರ ದೇಗುಲದ ಆವರಣದಲ್ಲಿ ಸುಮಾರು ಎಂಟು ಅಡಿ ಆಳಕ್ಕೆ ಅಗೆಯಲಾಗುತ್ತಿದ್ದು, ರಾಜ ಮಹಾರಾಜರ ಕಾಲದ ಗತ ವೈಭವದ ಕುರುಹುಗಳು ಪತ್ತೆಯಾಗುವ ನಿರೀಕ್ಷೆ ಸ್ಥಳೀಯರಲ್ಲಿ ಹೆಚ್ಚಿದೆ. ಸುತ್ತಮುತ್ತಲಿನ ಜಿಲ್ಲೆಗಳಿಂದ ಮಾತ್ರವಲ್ಲದೆ, ಫ್ರಾನ್ಸ್‌ನಂತಹ ದೂರದ ದೇಶಗಳಿಂದಲೂ ಪ್ರವಾಸಿಗರು ಲಕ್ಕುಂಡಿಯ ಐತಿಹಾಸಿಕ ಮಹತ್ವವನ್ನು ಕಣ್ತುಂಬಿಕೊಳ್ಳಲು ಆಗಮಿಸುತ್ತಿದ್ದಾರೆ.
ಗದಗ, ಜನವರಿ 23: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯ (Lakkundi Excavation) ಎಂಟನೇ ದಿನಕ್ಕೆ ಕಾಲಿಟ್ಟಿದೆ. ಕೋಟೆ ವೀರಭದ್ರೇಶ್ವರ ದೇಗುಲದ ಆವರಣದಲ್ಲಿ ಸುಮಾರು ಎಂಟು ಅಡಿ ಆಳಕ್ಕೆ ಅಗೆಯಲಾಗುತ್ತಿದ್ದು, ರಾಜ ಮಹಾರಾಜರ ಕಾಲದ ಗತ ವೈಭವದ ಕುರುಹುಗಳು ಪತ್ತೆಯಾಗುವ ನಿರೀಕ್ಷೆ ಸ್ಥಳೀಯರಲ್ಲಿ ಹೆಚ್ಚಿದೆ. ಸುತ್ತಮುತ್ತಲಿನ ಜಿಲ್ಲೆಗಳಿಂದ ಮಾತ್ರವಲ್ಲದೆ, ಫ್ರಾನ್ಸ್‌ನಂತಹ ದೂರದ ದೇಶಗಳಿಂದಲೂ ಪ್ರವಾಸಿಗರು ಲಕ್ಕುಂಡಿಯ ಐತಿಹಾಸಿಕ ಮಹತ್ವವನ್ನು ಕಣ್ತುಂಬಿಕೊಳ್ಳಲು ಆಗಮಿಸುತ್ತಿದ್ದಾರೆ.
ಆದಾಗ್ಯೂ, ಉತ್ಖನನ ಸ್ಥಳದಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳ ಕೊರತೆಯಿದೆ. ಜಿಲ್ಲಾಧಿಕಾರಿಗಳು ಈ ಪ್ರದೇಶವನ್ನು ನಿರ್ಬಂಧಿತ ವಲಯವೆಂದು ಘೋಷಿಸಿದ್ದರೂ, ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ ಮತ್ತು ಸಂಬಂಧಿತ ಅಧಿಕಾರಿಗಳು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಸಾರ್ವಜನಿಕರ ಓಡಾಟವು ಉತ್ಖನನ ಕಾರ್ಯಕ್ಕೆ ಅಡಚಣೆಯನ್ನುಂಟು ಮಾಡುತ್ತಿದೆ. ಪೊಲೀಸ್ ಮತ್ತು ಉತ್ಖನನ ಕಾರ್ಮಿಕರಿಗೆ ಜನರನ್ನು ನಿಯಂತ್ರಿಸುವುದು ಕಷ್ಟಕರವಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
