Gaganachukki Falls: ಧುಮ್ಮುಕ್ಕಿ ಹರಿಯುತ್ತಿದೆ ಗಗನಚುಕ್ಕಿ ಜಲಪಾತ, ವೀಕ್ಷಣೆಗೆ ಬರುತ್ತಿದ್ದಾರೆ ಪ್ರವಾಸಿಗರು

Edited By: ಸಾಧು ಶ್ರೀನಾಥ್​

Updated on: Aug 02, 2023 | 12:13 PM

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಗಗನಚುಕ್ಕಿ ಜಲಪಾತದಲ್ಲಿ. ಹೌದು ಕಬಿನಿ ಹಾಗೂ ಕೆಆರ್​ಎಸ್ ಜಲಾಶಯದಿಂದ ಕಪಿಲಾ ಹಾಗೂ ಕಾವೇರಿ ನದಿಗೆ ನೀರನ್ನ ಹರಿಬಿಟ್ಟಿರುವ ಹಿನ್ನೆಲೆಯಲ್ಲಿ ಗಗನಚುಚ್ಚಿ ಜಲಪಾತಕ್ಕೆ ಜೀವಕಳೆ ಬಂದಿದೆ.

ಮಂಡ್ಯ: ಹಚ್ಚಹಸಿರಿನಿಂದ ಕಂಗೊಳಿಸುತ್ತಿರೋ ಅರಣ್ಯ ಪ್ರದೇಶ. ಕಾಡಿನ ಮಧ್ಯೆ ಹಾಲ್ನೊರೆಯಂತೆ ಧುಮ್ಮುಕ್ಕುತ್ತಿರುವ ನೀರು. ಜಲಪಾತವನ್ನ ವೀಕ್ಷಣೆ ಮಾಡುತ್ತಿರೋ ಪ್ರವಾಸಿಗರು. ಅಂದಹಾಗೆ ಇಂತಹ ದೃಶ್ಯಕಂಡು ಬಂದಿದ್ದು, ಮಂಡ್ಯ ಜಿಲ್ಲೆಯ ಮಳವಳ್ಳಿ (Malavalli) ತಾಲೂಕಿನ ಗಗನಚುಕ್ಕಿ ಜಲಪಾತದಲ್ಲಿ. ಹೌದು ಕಬಿನಿ ಹಾಗೂ ಕೆಆರ್​ಎಸ್ ಜಲಾಶಯದಿಂದ ಕಪಿಲಾ ಹಾಗೂ ಕಾವೇರಿ ನದಿಗೆ ನೀರನ್ನ ಹರಿಬಿಟ್ಟಿರುವ ಹಿನ್ನೆಲೆಯಲ್ಲಿ ಗಗನಚುಚ್ಚಿ ಜಲಪಾತಕ್ಕೆ (Gaganachukki Falls) ಜೀವಕಳೆ ಬಂದಿದೆ. ಕೆಲವೇ ದಿನಗಳ ಕೆಳಗೆ ಸಂಪೂರ್ಣವಾಗಿ ಬತ್ತಿ ಹೋಗಿದ್ದ ಜಲಪಾತ ಇದೀಗ ಧುಮ್ಮುಕ್ಕುತ್ತಿದೆ.

ಹಾಲ್ನೋರೆಯಂತೆ ಮೇಲಿಂದ ಕೆಳಗೆ ಧುಮಕುವ ನೀರು ಪ್ರವಾಸಿಗರನ್ನ ತನ್ನತ್ತ ಸೆಳೆಯುತ್ತಿದೆ. ಸುತ್ತಲು ಅರಣ್ಯ ಪ್ರದೇಶ. ಅರಣ್ಯ ಪ್ರದೇಶದ ಮಧ್ಯೆ ಸುಂದರವಾಗಿ ಧುಮಕುತ್ತಿರೋ ಗಗನಚುಕ್ಕಿ ಜಲಪಾತವನ್ನ ನೋಡಲು ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಿಂದ ಪ್ರವಾಸಿಗರು ಬರುತ್ತಿದ್ದಾರೆ. ಅಂದಹಾಗೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಗಗನಚುಕ್ಕಿ ಜಲಪಾತ ಸಿಲಿಕಾನ್ ಸಿಟಿ ಬೆಂಗಳೂರು, ಹಾಗೂ ಸಾಂಸ್ಕೃತಿಕ ನಗರಿ ಮೈಸೂರಿನಿಂದ ಕೆಲವೇ ಕಿಲೋ ಮೀಟರ್ ದೂರದಲ್ಲಿದೆ. ಹೀಗಾಗಿ ವಿಕೆಂಡ್ ಸೇರಿದಂತೆ ಇತರೆ ದಿನಗಳನ್ನ ಎಂಜಾಯ್ ಮಾಡಲು ಅನೇಕ ಪ್ರವಾಸಿಗರು ಬರುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More