ಗಜೇಂದ್ರಗಡ: 3 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಅಗ್ನಿಶಾಮಕ ಠಾಣೆ ನಿರ್ಮಾಣವಾಗಿದ್ದರೂ ಸಿಬ್ಬಂದಿಯಿಲ್ಲದೆ ವ್ಯರ್ಥ

Edited By:

Updated on: Oct 13, 2026 | 12:27 PM

ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ 3 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಸುಸಜ್ಜಿತ ಅಗ್ನಿಶಾಮಕ ಠಾಣೆ, ಸಿಬ್ಬಂದಿ ಮತ್ತು ವಾಹನಗಳ ಕೊರತೆಯಿಂದ ನಿರುಪಯುಕ್ತವಾಗಿದೆ. ಒಂದೂವರೆ ವರ್ಷ ಕಳೆದರೂ ಉದ್ಘಾಟನೆಯಾಗದೆ, ಅಗ್ನಿ ಅವಘಡಗಳ ಸಂದರ್ಭದಲ್ಲಿ 30 ಕಿ.ಮೀ ದೂರದ ರೋಣದಿಂದ ನೆರವು ಪಡೆಯಬೇಕಾಗಿದೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಗದಗ, ಅಕ್ಟೋಬರ್ 13: ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಹೈಟೆಕ್ ಅಗ್ನಿಶಾಮಕ ಠಾಣೆ, ಸಿಬ್ಬಂದಿ ಮತ್ತು ಅಗ್ನಿಶಾಮಕ ವಾಹನಗಳ ಕೊರತೆಯಿಂದ ನಿರುಪಯುಕ್ತವಾಗಿದೆ. ಸುಸಜ್ಜಿತ ಕಟ್ಟಡ ಸಿದ್ಧವಾಗಿದ್ದರೂ, ಒಂದೂವರೆ ವರ್ಷ ಕಳೆದರೂ ಇನ್ನೂ ಉದ್ಘಾಟನೆಯ ಭಾಗ್ಯ ಕಂಡಿಲ್ಲ. ಗಜೇಂದ್ರಗಡ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಗ್ನಿ ಅವಘಡಗಳು ಸಂಭವಿಸಿದರೆ, ಸುಮಾರು 30 ಕಿಲೋಮೀಟರ್ ದೂರದಲ್ಲಿರುವ ರೋಣ ಪಟ್ಟಣದಿಂದ ಅಗ್ನಿಶಾಮಕ ಸಿಬ್ಬಂದಿ ಮತ್ತು ವಾಹನ ಬರಬೇಕಾದ ಪರಿಸ್ಥಿತಿ ಇದೆ. ಅಷ್ಟರಲ್ಲಿ ಅನಾಹುತದ ಪ್ರಮಾಣ ಹೆಚ್ಚಾಗಿ ಸಂಪೂರ್ಣ ನಾಶವಾಗುವ ಭೀತಿ ಜನರನ್ನು ಕಾಡುತ್ತಿದೆ. ಇತ್ತೀಚೆಗೆ ಗಜೇಂದ್ರಗಡದಲ್ಲಿ ಎರಡು ಅಂಗಡಿಗಳಿಗೆ ಬೆಂಕಿ ಬಿದ್ದಾಗ, ರೋಣದಿಂದ ವಾಹನ ಬರುವಷ್ಟರಲ್ಲಿ ಅಂಗಡಿಗಳು ಸುಟ್ಟು ಭಸ್ಮವಾಗಿದ್ದವು.

ಈ ದುಸ್ಥಿತಿಯಿಂದ ರೋಸಿಹೋಗಿರುವ ಗಜೇಂದ್ರಗಡ ತಾಲೂಕಿನ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ತಕ್ಷಣವೇ ಅಗ್ನಿಶಾಮಕ ಠಾಣೆಯನ್ನು ಉದ್ಘಾಟಿಸಿ, ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಿ ಮತ್ತು ಅಗ್ನಿಶಾಮಕ ವಾಹನವನ್ನು ಒದಗಿಸುವಂತೆ ಅವರು ಸಂಬಂಧಪಟ್ಟ ಇಲಾಖೆ ಮತ್ತು ಶಾಸಕರಾದ ಜಿ.ಎಸ್. ಪಾಟೀಲ್ ಅವರಿಗೆ ಒತ್ತಾಯಿಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More