ಮುದ್ದಾದ ಮೂರು ಮರಿಗಳಿಗೆ ಜನ್ಮ ನೀಡಿದ ‘ಗಾಮಿನಿ’: ಭಾರತದಲ್ಲಿ ಚೀತಾಗಳ ಸಂಖ್ಯೆ 38ಕ್ಕೆ ಏರಿಕೆ

Updated on: Feb 18, 2026 | 2:30 PM

ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ದಕ್ಷಿಣ ಆಫ್ರಿಕಾದ ಗಾಮಿನಿ ಚೀತಾ ಫೆಬ್ರವರಿ 18, 2026 ರಂದು ಮೂರು ಆರೋಗ್ಯಕರ ಮರಿಗಳಿಗೆ ಜನ್ಮ ನೀಡಿದೆ. ಇದರೊಂದಿಗೆ ಭಾರತದಲ್ಲಿ ಚೀತಾಗಳ ಒಟ್ಟು ಸಂಖ್ಯೆ 38ಕ್ಕೆ ಏರಿದ್ದು, 27 ಚೀತಾಗಳು ಭಾರತದಲ್ಲೇ ಜನಿಸಿವೆ. ಗಾಮಿನಿ ಮಾರ್ಚ್ 2024 ರಲ್ಲಿ ಆರು ಮರಿಗಳಿಗೆ ಜನ್ಮ ನೀಡಿ ದಾಖಲೆ ಮಾಡಿತ್ತು. ಈ ಸಂತಾನೋತ್ಪತ್ತಿ ಭಾರತದ ಮಹತ್ವಾಕಾಂಕ್ಷೆಯ ಚೀತಾ ಸಂರಕ್ಷಣಾ ಯೋಜನೆಗೆ ದೊಡ್ಡ ಯಶಸ್ಸು.

ಮಧ್ಯಪ್ರದೇಶ, ಫೆ.18: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ(KNP) ಇಂದು (ಫೆಬ್ರವರಿ 18, 2026) ದಕ್ಷಿಣ ಆಫ್ರಿಕಾದಿಂದ ತರಲಾಗಿದ್ದ ‘ಗಾಮಿನಿ’ (Gamini) ಎಂಬ ಹೆಣ್ಣು ಚೀತಾ ಮೂರು ಆರೋಗ್ಯವಂತ ಮರಿಗಳಿಗೆ ಜನ್ಮ ನೀಡಿದೆ. ಇದೀಗ ಭಾರತದಲ್ಲಿ ಚೀತಾಗಳ ಒಟ್ಟು ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಇದರಲ್ಲಿ 27 ಚೀತಾಗಳು ಭಾರತದ ಮಣ್ಣಿನಲ್ಲೇ ಜನಿಸಿದ ಮರಿಗಳಾಗಿವೆ ಎಂಬುದು ವಿಶೇಷ. ಕಳೆದ ಬಾರಿ (ಮಾರ್ಚ್ 2024 ರಲ್ಲಿ) ಗಾಮಿನಿ ಆರು ಮರಿಗಳಿಗೆ ಜನ್ಮ ನೀಡುವ ಮೂಲಕ ದಾಖಲೆ ನಿರ್ಮಿಸಿತ್ತು. ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಮತ್ತು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More