AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಂಗೂರು ಟೋಲ್‌ನಲ್ಲಿ ಗೂಂಡಾವರ್ತನೆ: ಫಾಸ್ಟ್‌ಟ್ಯಾಗ್‌ನಲ್ಲಿ ಹಣವಿಲ್ಲದ್ದಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ!

ಗಣಂಗೂರು ಟೋಲ್‌ನಲ್ಲಿ ಗೂಂಡಾವರ್ತನೆ: ಫಾಸ್ಟ್‌ಟ್ಯಾಗ್‌ನಲ್ಲಿ ಹಣವಿಲ್ಲದ್ದಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ!

ದಿಲೀಪ್​, ಚೌಡಹಳ್ಳಿ
| Edited By: |

Updated on: Apr 10, 2026 | 11:04 AM

Share

ಗಣಂಗೂರು ಟೋಲ್ ಸಿಬ್ಬಂದಿ ಮಹೇಶ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ಫಾಸ್ಟ್‌ಟ್ಯಾಗ್ ಬ್ಯಾಲೆನ್ಸ್ ಸಮಸ್ಯೆಯಿಂದ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಸಿಬ್ಬಂದಿ ಯುವಕನ ಮೊಬೈಲ್ ಕಿತ್ತುಕೊಂಡು ಗೂಂಡಾವರ್ತನೆ ತೋರಿದ್ದಾರೆ. ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ನಡೆದ ಈ ಘಟನೆಯ ವಿಡಿಯೋ ಈಗ ವೈರಲ್ ಆಗುತ್ತಿದೆ.

ಮಂಡ್ಯ, ಏಪ್ರಿಲ್ 10: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಟೋಲ್ ಸಿಬ್ಬಂದಿ ಯುವಕನ ಮೇಲೆ ಹಲ್ಲೆ ನಡೆಸಿ ಗೂಂಡಾವರ್ತನೆ ತೋರಿದ್ದಾರೆ. ಫಾಸ್ಟ್‌ಟ್ಯಾಗ್‌ನಲ್ಲಿ ಹಣ ಖಾಲಿಯಾದ ಕಾರಣಕ್ಕೆ ಉಂಟಾದ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ, ಮಹೇಶ್ ಎಂಬ ಯುವಕನಿಗೆ ಟೋಲ್ ಸಿಬ್ಬಂದಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಎರಡು ದಿನದ ಹಿಂದೆ ಮಹೇಶ್ ತನ್ನ ಸ್ನೇಹಿತರೊಂದಿಗೆ ಕಾರಿನಲ್ಲಿ ಬರುತ್ತಿದ್ದಾಗ ಫಾಸ್ಟ್‌ಟ್ಯಾಗ್‌ನಲ್ಲಿ ಹಣವಿಲ್ಲದಿರುವುದು ಗೊತ್ತಾಗಿತ್ತು. ಈ ವೇಳೆ ಯುವಕ ತನ್ನ ಪರಿಚಿತರಿಗೆ ಕರೆ ಮಾಡಿ ಮಾತಾಡುವುದಾಗಿ ಹೇಳಿದರೂ ಕೇಳದ ಸಿಬ್ಬಂದಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಆತನ ಮೊಬೈಲ್ ಕಿತ್ತುಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಮಹೇಶ್ ಮೇಲೆ ಗೂಂಡಾಗಳಂತೆ ಮುಗಿಬಿದ್ದು ಹಲ್ಲೆ ನಡೆಸಿದ್ದು, ಈ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಟೋಲ್ ಸಿಬ್ಬಂದಿಯ ಈ ದರ್ಪಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us