ವಿಧಾನಸೌಧದಲ್ಲಿ ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ

Edited By:

Updated on: Oct 14, 2026 | 7:28 PM

ಐತಿಹಾಸಿಕ ದೇವಿಗೆರೆಯ ಪೆಂಡಾಲ್ ಗಣಪತಿ ವಿಸರ್ಜನೆ ವಿಚಾರಕ್ಕೆ ಹಾಸನ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ನಡುವಿನ ಮುಸುಕಿನ ಗುದ್ದಾಟ ಸುಖಾಂತ್ಯ ಕಂಡಿದೆ. ಈಗ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿದೆ. ನಿಷೇಧಾಜ್ಞೆ ಇದ್ದರೂ ವಿಸರ್ಜನೆಗೆ ಅವಕಾಶ ನೀಡಿದ್ಯಾಕೆ ಎನ್ನುವ ವಿಚಾರಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಭಾನ್ವಿತಾಗೆ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ನೋಟಿಸ್ ಜಾರಿ ಮಾಡಿದ್ದು, ಇದು ತೀವ್ರ ತಾರಕಕ್ಕೇರಿತ್ತು. ಅಲ್ಲದೇ ಇದು ರಾಜಕೀಯ ಸ್ವರೂಪ ಪಡೆದುಕೊಂಡಿತ್ತು. ಹೀಗಾಗಿ ಎಚ್ಚೆತ್ತ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಸ್ ಅವರು ಇಬ್ಬರನ್ನು ಕರೆಯಿಸಿ ವಿಚಾರಣೆ ಮಾಡಿ ಸಂಧಾನ ಮಾಡಿದ್ದಾರೆ.

ಬೆಂಗಳೂರು/ಹಾಸನ (ಅ.14): ಐತಿಹಾಸಿಕ ದೇವಿಗೆರೆಯ ಪೆಂಡಾಲ್ ಗಣಪತಿ ವಿಸರ್ಜನೆ ವಿಚಾರಕ್ಕೆ ಹಾಸನ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ನಡುವಿನ ಮುಸುಕಿನ ಗುದ್ದಾಟ ಸುಖಾಂತ್ಯ ಕಂಡಿದೆ. ಈಗ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿದೆ. ನಿಷೇಧಾಜ್ಞೆ ಇದ್ದರೂ ವಿಸರ್ಜನೆಗೆ ಅವಕಾಶ ನೀಡಿದ್ಯಾಕೆ ಎನ್ನುವ ವಿಚಾರಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಭಾನ್ವಿತಾಗೆ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ನೋಟಿಸ್ ಜಾರಿ ಮಾಡಿದ್ದು, ಇದು ತೀವ್ರ ತಾರಕಕ್ಕೇರಿತ್ತು. ಅಲ್ಲದೇ ಇದು ರಾಜಕೀಯ ಸ್ವರೂಪ ಪಡೆದುಕೊಂಡಿತ್ತು. ಹೀಗಾಗಿ ಎಚ್ಚೆತ್ತ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಸ್ ಅವರು ಇಬ್ಬರನ್ನು ಕರೆಯಿಸಿ ವಿಚಾರಣೆ ಮಾಡಿ ಸಂಧಾನ ಮಾಡಿದ್ದಾರೆ.

ಇಂದು (ಅಕ್ಟೋಬರ್ 14) ವಿಧಾನಸಭೆಯಲ್ಲಿರುವ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡರ ಕೊಠಡಿಯಲ್ಲಿ CS ಶಾಲಿನಿ ರಜನೀಶ್ ಸಮ್ಮುಖದಲ್ಲಿ ಸಂಧಾನ ಸಭೆ ಆಗಿದ್ದು, ಇಬ್ಬರ ಗುದ್ದಾಟಕ್ಕೆ ಬ್ರೇಕ್ ಬಿದ್ದಿದೆ. ಇನ್ನು ಸಭೆ ಬಳಿಕ ಎಸ್ಪಿ ಶುಭನ್ವಿತ ಹಾಗೂ ಡಿಸಿ ಲತಾಕುಮಾರಿ ಅವರು ಪರಸ್ಪರ ಕೈಕುಲುಕಿ ಅಪ್ಪುಗೆ ಮೂಲ ಒಮ್ಮತ ಪ್ರದರ್ಶನ ಮಾಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More