ಗಾಂಧಿ ಭಾರತ: ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್
1924ರ ಬೆಳಗಾವಿ ಕಾಂಗ್ರೆಸ್ ಮಹಾ ಅಧಿವೇಶನದ ಶತಮಾನೋತ್ಸವ ಭರ್ಜರಿಯಾಗಿ ಆರಂಭವಾಗಿದ್ದು, ಬೆಳಗಾವಿಯ ವೀರಸೌಧದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಯನ್ನು ಅನಾವರಣಗೊಳಿಸಲಾಯಿತು. ನಂತರ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನಕ್ಕೂ ಚಾಲನೆ ನೀಡಲಾಯಿತು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಕಾಂಗ್ರೆಸ್ನ ಗಣ್ಯಾತಿ ಗಣ್ಯ ನಾಯಕರು ಹಾಜರಿದ್ದರು.
ಬೆಳಗಾವಿ, ಡಿಸೆಂಬರ್ 26: ಬೆಳಗಾವಿಯಲ್ಲಿ ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆರಂಭವಾಗಿದ್ದು, ದೇಶದ ವಿವಿಧೆಡೆಗಳಿಂದ ಕಾಂಗ್ರೆಸ್ ನಾಯಕರು ಆಗಮಿಸಿದ್ದಾರೆ. ಇದೇ ವೇಳೆ, ಬೆಳಗಾವಿಯ ವೀರಸೌಧದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಗಾಂಧೀಜಿ ಪ್ರತಿಮೆ ಅನಾವರಣಗೊಳಿಸಿದರು. ನಂತರ ಕಾಂಗ್ರೆಸ್ ನಾಯಕರು ಗಾಂಧಿ ಪ್ರತಿಮೆ ಎದುರು ಫೋಟೊ ತೆಗೆಸಿಕೊಂಡರು.
ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಖಾದಿ ಉತ್ಸವಕ್ಕೆ ಚಾಲನೆ ನೀಡಿದರು. ಬೆಳಗಾವಿ ನಗರದ ಸರ್ದಾರ್ ಮೈದಾನದಲ್ಲಿ ರಾಜ್ಯ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ನಡೆಯುತ್ತಿದೆ. ಮಹಿಳಾ ಸ್ವಸಹಾಯ ಸಂಘಗಳ ಉತ್ಪನ್ನಗಳ ವಸ್ತು ಪ್ರದರ್ಶನ ನಡೆಯುತ್ತಿದೆ. ಸಿಎಂಗೆ ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವು ಸಚಿವರ ಸಾಥ್ ನೀಡಿದರು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ

