ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ ವೈರಲ್
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಯಾದಗಿರಿಯಲ್ಲಿ ಗಾಂಧಿ ಭಾರತದ ರಾಷ್ಟ್ರಪಿತರಲ್ಲ, ಪಾಕಿಸ್ತಾನದವರು ಎಂದಿದ್ದಾರೆ. ನೆಹರೂ ಮೊದಲ ಪ್ರಧಾನಿಯಲ್ಲ, ನೇತಾಜಿ ಸುಭಾಷ್ ಚಂದ್ರ ಬೋಸ್ ಮೊದಲ PM ಆಗಿದ್ದರು ಎಂದು ವಾದಿಸಿದ್ದಾರೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ವೈರಲ್ ಆಗಿದೆ.
ಯಾದಗಿರಿ, ಫೆಬ್ರವರಿ 23: ಮಹಾತ್ಮ ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದ ರಾಷ್ಟ್ರಪಿತ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಫೆ. 21ರಂದು ಜಿಲ್ಲೆಯ ಗುರುಮಠಕಲ್ನಲ್ಲಿ ನಡೆದ ಶಿವಾಜಿ ಜಯಂತಿಯಲ್ಲಿ ಮಾತನಾಡಿದ ಶಾಸಕ ಯತ್ನಾಳ್ ಭಾಷಣದ ವಿಡಿಯೋ ಇದೀಗ ವೈರಲ್ ಆಗಿದೆ. ಗಾಂಧೀಜಿಯನ್ನ ಭಾರತದ ರಾಷ್ಟ್ರಪಿತ ಎಂದು ನಾನು ಒಪ್ಪಿಕೊಳ್ಳುವುದಿಲ್ಲ. ಜವಾಹರ ಲಾಲ್ ನೆಹರುರನ್ನು ಮೊದಲ ಪ್ರಧಾನಿ ಎಂದು ಒಪ್ಪಿಕೊಳ್ಳಲ್ಲ ಎಂದು ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಸಿಎಂ ಡಿಕೆ ಶಿವಕುಮಾರ್ ಮಂಗಳೂರು ಮೀನುಗಾರಿಕೆ ಬಂದರಿಗೆ ದಿಢೀರ್ ಭೇಟಿ
ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!
ಟಿ ನರಸೀಪುರದಲ್ಲಿ ಮಸೀದಿ ಮುಂದೆಯೇ ಗಣೇಶ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮ
ರವಿ ಕನ್ಯಾ ರಾಶಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ

