ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್​ ವಿವಾದಾತ್ಮಕ ಹೇಳಿಕೆ ವೈರಲ್

Edited By:

Updated on: Feb 23, 2026 | 7:01 PM

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಯಾದಗಿರಿಯಲ್ಲಿ ಗಾಂಧಿ ಭಾರತದ ರಾಷ್ಟ್ರಪಿತರಲ್ಲ, ಪಾಕಿಸ್ತಾನದವರು ಎಂದಿದ್ದಾರೆ. ನೆಹರೂ ಮೊದಲ ಪ್ರಧಾನಿಯಲ್ಲ, ನೇತಾಜಿ ಸುಭಾಷ್ ಚಂದ್ರ ಬೋಸ್ ಮೊದಲ PM ಆಗಿದ್ದರು ಎಂದು ವಾದಿಸಿದ್ದಾರೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ವೈರಲ್ ಆಗಿದೆ.

ಯಾದಗಿರಿ, ಫೆಬ್ರವರಿ 23: ಮಹಾತ್ಮ ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದ ರಾಷ್ಟ್ರಪಿತ ಎಂದು  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಫೆ. 21ರಂದು ಜಿಲ್ಲೆಯ ಗುರುಮಠಕಲ್​ನಲ್ಲಿ ನಡೆದ ಶಿವಾಜಿ ಜಯಂತಿಯಲ್ಲಿ ಮಾತನಾಡಿದ ಶಾಸಕ ಯತ್ನಾಳ್ ಭಾಷಣದ ವಿಡಿಯೋ ಇದೀಗ ವೈರಲ್ ಆಗಿದೆ. ಗಾಂಧೀಜಿಯನ್ನ ಭಾರತದ ರಾಷ್ಟ್ರಪಿತ ಎಂದು ನಾನು ಒಪ್ಪಿಕೊಳ್ಳುವುದಿಲ್ಲ. ಜವಾಹರ ಲಾಲ್ ನೆಹರುರನ್ನು ಮೊದಲ ಪ್ರಧಾನಿ ಎಂದು ಒಪ್ಪಿಕೊಳ್ಳಲ್ಲ ಎಂದು ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಅಮೀನ್​ ಸಾಬ್​

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More