ಗಣೇಶ ಚತುರ್ಥಿ: ಬಸವನಗುಡಿಯ ದೊಡ್ಡಗಣಪತಿ ದೇಗುಲದಲ್ಲಿ ಸಂಭ್ರಮ, ವಿಡಿಯೋ ನೋಡಿ

Updated on: Aug 27, 2025 | 8:54 AM

Ganesh Chaturthi 2025: ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಬೆಂಗಳೂರಿನ ಬಸವನಗುಡಿಯಲ್ಲಿರುವ ದೊಡ್ಡ ಗಣಪತಿ ದೇಗುಲದಲ್ಲಿ ಸಂಭ್ರಮ ಮನೆ ಮಾಡಿದೆ. ದೇಗುಲದಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜೆ ನೆರವೇರುತ್ತಿದ್ದು, ಭಕ್ತರ ಪ್ರವಾಹವೇ ಹರಿದು ಬರುತ್ತಿದೆ. ದೊಡ್ಡ ಗಣಪತಿ ದೇಗುಲದ ಚೌತಿ ಸಂಭ್ರಮದ ವಿಡಿಯೋ ಇಲ್ಲಿದೆ.

ಬೆಂಗಳೂರು, ಆಗಸ್ಟ್ 27: ರಾಜ್ಯದೆಲ್ಲೆಡೆ ಇಂದು ಗಣೇಶ ಚತುರ್ಥಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜೆಗಳು ನೆರವೇರುತ್ತವೆ. ನೂರಾರು ಸಂಖ್ಯೆಯಲ್ಲಿ ಭಕ್ತರು ಬೆಳಗ್ಗೆಯೇ ದೇವಸ್ಥಾನದತ್ತ ಬರುತ್ತಿದ್ದು, ಗಣಪತಿಯ ದರ್ಶನ ಪಡೆಯುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Aug 27, 2025 08:52 AM