AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಬಸವನಗುಡಿ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಅದ್ಧೂರಿ ಸಂಭ್ರಮ

ಬೆಂಗಳೂರಿನ ಬಸವನಗುಡಿ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಅದ್ಧೂರಿ ಸಂಭ್ರಮ

ಅಕ್ಷಯ್​ ಪಲ್ಲಮಜಲು​​
|

Updated on:Sep 14, 2026 | 11:13 AM

Share

ಬೆಂಗಳೂರಿನ ಐತಿಹಾಸಿಕ ಬಸವನಗುಡಿ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಗಣೇಶ ಚತುರ್ಥಿ 2026ರ ಸಂಭ್ರಮ ಮುಗಿಲುಮುಟ್ಟಿದೆ. ಬೆಳಗ್ಗೆ 2:30ಕ್ಕೆ ಅಭಿಷೇಕ ಆರಂಭವಾಗಿದ್ದು, ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದಾರೆ. 1,000 ಲೀಟರ್‌ಗಳ ಹಾಲಿನ ಅಭಿಷೇಕ, ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ ಕಾರ್ಯಕ್ರಮಗಳು ಜಾರಿಯಲ್ಲಿವೆ.

ಬೆಂಗಳೂರು, ಸೆ,14: ಐತಿಹಾಸಿಕ ಬಸವನಗುಡಿ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಗಣೇಶ ಚತುರ್ಥಿ 2026ರ ಸಂಭ್ರಮ ಜೋರಾಗಿದೆ. ಮುಂಜಾನೆಯಿಂದಲೇ ದೇವಾಲಯಕ್ಕೆ ಸಾವಿರಾರು ಭಕ್ತರ ದಂಡು ಹರಿದುಬಂದಿದ್ದು, ದೇವರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ದೊಡ್ಡ ಗಣಪತಿ ದೇವಾಲಯವು ತನ್ನದೇ ಆದ ಇತಿಹಾಸ ಮತ್ತು ಕನ್ನಡದ ಸಂಸ್ಕೃತಿ, ಪರಂಪರೆಯನ್ನು ಉಳಿಸಿಕೊಂಡಿರುವ ಪ್ರದೇಶವಾಗಿ ಗುರುತಿಸಿಕೊಂಡಿದೆ. ಬೆಳಗ್ಗೆ 2:30ಕ್ಕೆ ದೇವರಿಗೆ ವಿಶೇಷ ಅಭಿಷೇಕ ಕಾರ್ಯಕ್ರಮಗಳು ಆರಂಭವಾದವು. ದೇವಸ್ಥಾನದ ಆಡಳಿತ ಮಂಡಳಿಯ ಪ್ರಕಾರ, ಗಣಪತಿಗೆ 1,000 ಲೀಟರ್‌ಗಳ ಹಾಲಿನ ಅಭಿಷೇಕ ಮಾಡಲಾಗಿದೆ. ಬೆಳಗ್ಗೆ 6:00 ಗಂಟೆಗೆ ಮಹಾಮಂಗಳಾರತಿ ನೆರವೇರಿದ್ದು, ಅಂದಿನಿಂದ ರಾತ್ರಿ 12:00 ಗಂಟೆಯವರೆಗೆ ನಿರಂತರವಾಗಿ ಪ್ರಸಾದ ವಿತರಣೆ ನಡೆಯುತ್ತಿದೆ. ನಾಳೆ ಸಂಜೆ 6:00 ಗಂಟೆಗೆ ಪಲ್ಲಕ್ಕಿ ಉತ್ಸವವೂ ಇರಲಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದ ಭಕ್ತರು, ಈ ಪವಿತ್ರ ದಿನದಂದು ದೊಡ್ಡ ಗಣಪತಿಯ ದರ್ಶನ ಭಾಗ್ಯ ದೊರೆತಿದ್ದು ತಮ್ಮ ಪುಣ್ಯ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಹಬ್ಬದ ಪ್ರಯುಕ್ತ ದೇವಸ್ಥಾನದಲ್ಲಿ ಉತ್ತಮ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 14, 2026 10:13 AM

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More