ಬೆಂಗಳೂರಿನ ಬಸವನಗುಡಿ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಅದ್ಧೂರಿ ಸಂಭ್ರಮ
ಬೆಂಗಳೂರಿನ ಐತಿಹಾಸಿಕ ಬಸವನಗುಡಿ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಗಣೇಶ ಚತುರ್ಥಿ 2026ರ ಸಂಭ್ರಮ ಮುಗಿಲುಮುಟ್ಟಿದೆ. ಬೆಳಗ್ಗೆ 2:30ಕ್ಕೆ ಅಭಿಷೇಕ ಆರಂಭವಾಗಿದ್ದು, ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದಾರೆ. 1,000 ಲೀಟರ್‌ಗಳ ಹಾಲಿನ ಅಭಿಷೇಕ, ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ ಕಾರ್ಯಕ್ರಮಗಳು ಜಾರಿಯಲ್ಲಿವೆ.
ಬೆಂಗಳೂರು, ಸೆ,14: ಐತಿಹಾಸಿಕ ಬಸವನಗುಡಿ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಗಣೇಶ ಚತುರ್ಥಿ 2026ರ ಸಂಭ್ರಮ ಜೋರಾಗಿದೆ. ಮುಂಜಾನೆಯಿಂದಲೇ ದೇವಾಲಯಕ್ಕೆ ಸಾವಿರಾರು ಭಕ್ತರ ದಂಡು ಹರಿದುಬಂದಿದ್ದು, ದೇವರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ದೊಡ್ಡ ಗಣಪತಿ ದೇವಾಲಯವು ತನ್ನದೇ ಆದ ಇತಿಹಾಸ ಮತ್ತು ಕನ್ನಡದ ಸಂಸ್ಕೃತಿ, ಪರಂಪರೆಯನ್ನು ಉಳಿಸಿಕೊಂಡಿರುವ ಪ್ರದೇಶವಾಗಿ ಗುರುತಿಸಿಕೊಂಡಿದೆ. ಬೆಳಗ್ಗೆ 2:30ಕ್ಕೆ ದೇವರಿಗೆ ವಿಶೇಷ ಅಭಿಷೇಕ ಕಾರ್ಯಕ್ರಮಗಳು ಆರಂಭವಾದವು. ದೇವಸ್ಥಾನದ ಆಡಳಿತ ಮಂಡಳಿಯ ಪ್ರಕಾರ, ಗಣಪತಿಗೆ 1,000 ಲೀಟರ್‌ಗಳ ಹಾಲಿನ ಅಭಿಷೇಕ ಮಾಡಲಾಗಿದೆ. ಬೆಳಗ್ಗೆ 6:00 ಗಂಟೆಗೆ ಮಹಾಮಂಗಳಾರತಿ ನೆರವೇರಿದ್ದು, ಅಂದಿನಿಂದ ರಾತ್ರಿ 12:00 ಗಂಟೆಯವರೆಗೆ ನಿರಂತರವಾಗಿ ಪ್ರಸಾದ ವಿತರಣೆ ನಡೆಯುತ್ತಿದೆ. ನಾಳೆ ಸಂಜೆ 6:00 ಗಂಟೆಗೆ ಪಲ್ಲಕ್ಕಿ ಉತ್ಸವವೂ ಇರಲಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದ ಭಕ್ತರು, ಈ ಪವಿತ್ರ ದಿನದಂದು ದೊಡ್ಡ ಗಣಪತಿಯ ದರ್ಶನ ಭಾಗ್ಯ ದೊರೆತಿದ್ದು ತಮ್ಮ ಪುಣ್ಯ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಹಬ್ಬದ ಪ್ರಯುಕ್ತ ದೇವಸ್ಥಾನದಲ್ಲಿ ಉತ್ತಮ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
