Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10,001 ಕರಿಗಡುಬಿನಲ್ಲಿ ಅರಳಿದ ಗಣಪತಿ!

ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10,001 ಕರಿಗಡುಬಿನಲ್ಲಿ ಅರಳಿದ ಗಣಪತಿ!

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: Ganapathi Sharma

Updated on: Sep 07, 2024 | 12:28 PM

ಕರ್ನಾಟಕದಾದ್ಯಂತ ಗಣೇಶ ಚತುರ್ಥಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕೋಲಾರದ ಕೋಲಾರಮ್ಮ ದೇವಾಲಯದ ಸನಿಹದಲ್ಲಿರುವ ಸಂಕಷ್ಟಹರ ಗಣಪತಿ ದೇವಾಲಯದಲ್ಲಿ ಕೇವಲ ಕರಿಗಡುಬುಗಳನ್ನೇ ಬಳಸಿಕೊಂಡು 15 ಅಡಿ ಎತ್ತರದ ಗಣೇಶ ಮೂರ್ತಿ ತಯಾರಿಸಲಾಗಿದ್ದು, ಭಕ್ತರ ಗಮನ ಸೆಳೆಯುತ್ತಿದೆ. ವಿಡಿಯೋ ಇಲ್ಲಿದೆ.

ಕೋಲಾರ, ಸೆಪ್ಟೆಂಬರ್ 7: ಗಣೇಶ ಚತುರ್ಥಿ ಅಂಗವಾಗಿ ಕೋಲಾರದ ಕೋಲಾರಮ್ಮ ದೇವಾಲಯದ ಪಕ್ಕದಲ್ಲಿರುವ ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10,001 ಕರಿಗಡುಬು ಬಳಸಿ‌ ಗಣೇಶ ಮೂರ್ತಿ ತಯಾರಿಸಲಾಗಿದ್ದು, ಗಮನ ಸೆಳೆಯುತ್ತಿದೆ. ಸುಮಾರು 15 ಅಡಿ ಎತ್ತರದ ಕರಿಗಡಬು ಗಣೇಶನನ್ನು ನೋಡಲು ಭಕ್ತರ ದಂಡೇ ಹರಿದುಬರುತ್ತಿದೆ. ವಿಶೇಷವಾಗಿ ನಿರ್ಮಾಣ ಮಾಡಿರುವ ಗಣೇಶ ಮೂರ್ತಿ ಗಣೇಶ ಹಬ್ಬದ ವಿಶೇಷ ಆಕರ್ಷಣೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ