‘ಕೃಷ್ಣಂ ಪ್ರಣಯ ಸಖಿ’ ಚಿತ್ರಕ್ಕೆ ಭರ್ಜರಿ ಓಪನಿಂಗ್​; ಗಣೇಶ್​ ಗೆಲುವಿನ ನಗು

Updated on: Aug 15, 2024 | 6:42 PM

ಚಿತ್ರಮಂದಿರಗಳಿಗೆ ಜನರು ಬರುತ್ತಿಲ್ಲ ಎಂಬ ಕೊರಗನ್ನು ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ನೀಗಿಸಿದೆ. ಗಣೇಶ್​, ಮಾಳವಿಕಾ ನಾಯರ್​, ಶರಣ್ಯ ಶೆಟ್ಟಿ ಮುಂತಾದವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಜನರಿಂದ ಸಿಕ್ಕಿರುವ ಪಾಸಿಟಿವ್​ ಪ್ರತಿಕ್ರಿಯೆ ಕಂಡು ಚಿತ್ರತಂಡಕ್ಕೆ ತುಂಬ ಸಂತಸ ಆಗಿದೆ. ಈ ಖುಷಿಯಲ್ಲಿ ಗಣೇಶ್​ ಅವರು ಮಾತಾಡಿದ್ದಾರೆ.

‘ಗೋಲ್ಡನ್​ ಸ್ಟಾರ್​’ ಗಣೇಶ್​ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾಗೆ ಉತ್ತಮ ಓಪನಿಂಗ್​ ಸಿಕ್ಕಿದೆ. ಇಂದು (ಆಗಸ್ಟ್​ 15) ಸರ್ಕಾರಿ ರಜೆ ಇರುವುದರಿಂದ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬಂದಿದ್ದಾರೆ. ಮೊದಲ ದಿನ ಜನರ ಪ್ರತಿಕ್ರಿಯೆ ಕಂಡು ಗಣೇಶ್​ ಖುಷಿಯಾಗಿದ್ದಾರೆ. ಕಳೆದ ಒಂದು ತಿಂಗಳಿಂದ ಈ ಸಿನಿಮಾದ ಹಾಡುಗಳು ಧೂಳೆಬ್ಬಿಸುತ್ತಿದ್ದವು. ಸಿಕ್ಕಾಪಟ್ಟೆ ವೈರಲ್​ ಆಗಿದ್ದ ‘ದ್ವಾಪರ..’ ಹಾಡನ್ನು ಈಗ ದೊಡ್ಡ ಪರದೆಯಲ್ಲಿ ನೋಡಿ ಅಭಿಮಾನಿಗಳು ಎಂಜಾಯ್​ ಮಾಡುತ್ತಿದ್ದಾರೆ. ಸಿನಿಮಾಗೆ ಗೆಲುವು ಸಿಕ್ಕಿರುವ ಖುಷಿಯಲ್ಲಿ ಗಣೇಶ್​ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More