ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶ ಹಬ್ಬ
ಕರ್ನಾಟಕದಾದ್ಯಂತ ಗಣೇಶ ಹಬ್ಬವನ್ನು ಅತ್ಯಂತ ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರ ಗ್ರಾಮದಲ್ಲಿ ಹಿಂದೂ-ಮುಸ್ಲಿಂ ಸಮುದಾಯದವರಿಂದ ಗಣೇಶ ಪ್ರತಿಷ್ಠಾಪನೆ ಮಾಡುವ ಮೂಲಕ ಭಾವೈಕ್ಯತೆಯ ಸಂದೇಶ ಸಾರಲಾಗಿದೆ. ಮಸೀದಿ ಆವರಣದಲ್ಲಿ ಗಣೇಶನನ್ನು ಕುರಿಸಿರುವುದು ಮತ್ತೊಂದು ವಿಶೇಷವಾಗಿದೆ.
ಕೊಪ್ಪಳ, ಸೆಪ್ಟೆಂಬರ್ 07: ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರ ಗ್ರಾಮದಲ್ಲಿ ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ (Ganesh Chaturthi) ಮಾಡುವ ಮೂಲಕ ಹಿಂದೂ ಮುಸ್ಲಿಂ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ. ಕಳೆದ ಮೂರು ವರ್ಷಗಳಿಂದ ಮಸಿದಿಯ ಆವರಣದಲ್ಲಿ ಹಿಂದೂ ಮುಸ್ಲಿಂ ಸಮುದಾಯದವರಿಂದ ಗಣೇಶ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಐದು ದಿನಗಳ ಕಾಲ ಗಣೇಶ ಪ್ರತಿಷ್ಠಾಪಿಸಿ ಪೂಜಾ ಕೈಂಕರ್ಯಗಳನ್ನ ನಡೆಸಲಾಗುತ್ತದೆ, ನಾಲ್ಕನೇ ದಿನ ಅನ್ನಸಂತರ್ಪಣೆ ಸೇರಿ ವಿವಿಧ ಕಾರ್ಯಕ್ರಮಗಳೂ ಸಹ ಆಯೋಜನೆ ಮಾಡಲಾಗುತ್ತೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.