ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ: ಮೆಜೆಸ್ಟಿಕ್​ನಲ್ಲಿ ಫುಲ್ ರಶ್

ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ: ಮೆಜೆಸ್ಟಿಕ್​ನಲ್ಲಿ ಫುಲ್ ರಶ್

ಕಿರಣ್ ಹನುಮಂತ್​ ಮಾದಾರ್
|

Updated on:Sep 06, 2024 | 5:41 PM

ಗೌರಿ ಗಣೇಶ ಹಬ್ಬದ ಹಿನ್ನಲೆ ಸಾಲು ಸಾಲು ರಜೆ ಇದ್ದು, ತಮ್ಮ ಊರುಗಳಿಗೆ ಜನ ತೆರಳುತ್ತಿದ್ದಾರೆ. ಈ ಹಿನ್ನಲೆ ಮೆಜೆಸ್ಟಿಕ್​ನ ಕೆಂಪೇಗೌಡ ಬಸ್ ನಿಲ್ದಾಣದತ್ತ ಆಗಮಿಸುತ್ತಿದ್ದಾರೆ. ಇದರಿಂದ ಮೆಜೆಸ್ಟಿಕ್ ಬಸ್ ನಿಲ್ದಾಣ ಫುಲ್ ರಶ್ ಆಗಿದೆ. ಹಬ್ಬದ ಪ್ರಯುಕ್ತ ಕೆಎಸ್​ಆರ್​ಟಿಸಿ ಹೆಚ್ಚುವರಿಯಾಗಿ 1500ಕ್ಕೂ ಅಧಿಕ ಬಸ್​ಗಳ ವ್ಯವಸ್ಥೆ ಕೂಡ ಮಾಡಲಾಗಿದೆ. 

ಬೆಂಗಳೂರು, ಸೆ.06: ಗೌರಿ ಗಣೇಶ ಹಬ್ಬದ ಹಿನ್ನಲೆ ಸಾಲು ಸಾಲು ರಜೆ ಇದ್ದು, ತಮ್ಮ ಊರುಗಳಿಗೆ ಜನ ತೆರಳುತ್ತಿದ್ದಾರೆ. ಈ ಹಿನ್ನಲೆ ಮೆಜೆಸ್ಟಿಕ್​ನ ಕೆಂಪೇಗೌಡ ಬಸ್ ನಿಲ್ದಾಣದತ್ತ ಆಗಮಿಸುತ್ತಿದ್ದಾರೆ. ಇದರಿಂದ ಮೆಜೆಸ್ಟಿಕ್ ಬಸ್ ನಿಲ್ದಾಣ ಫುಲ್ ರಶ್ ಆಗಿದೆ. ಹಬ್ಬದ ಪ್ರಯುಕ್ತ ಕೆಎಸ್​ಆರ್​ಟಿಸಿ ಹೆಚ್ಚುವರಿಯಾಗಿ 1500ಕ್ಕೂ ಅಧಿಕ ಬಸ್​ಗಳ ವ್ಯವಸ್ಥೆ ಕೂಡ ಮಾಡಲಾಗಿದೆ.  ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ವಿಜಯಪುರ
ಗೋಕರ್ಣ, ಶಿರಸಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹಾಸನ, ಬೆಳಗಾವಿ, ಹೊರನಾಡು, ರಾಯಚೂರು, ಬೀದರ್, ಯಾದಗಿರಿ
ಕಲಬುರಗಿ, ಹೈದರಾಬಾದ್, ವಿಜಯವಾಡ, ತಿರುಪತಿಗೆ ಬಸ್ ವ್ಯವಸ್ಥೆ ಮಾಡಲಾಗಿದ್ದು, ಆದರೂ ಬಸ್ ಕೊರತೆ ಹಿನ್ನೆಲೆ ಬಿಎಂಟಿಸಿ ಬಸ್​ಗಳನ್ನು ಬಳಸಿಕೊಳ್ಳಲಾಗುತ್ತಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 06, 2024 05:39 PM