AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ

ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ

Shivaraj
| Edited By: |

Updated on: Sep 11, 2026 | 10:41 PM

Share

ಗಣೇಶ ಹಬ್ಬದ ಆಚರಣೆಗೆ ಬೆಂಗಳೂರಿನಲ್ಲಿ ಸಮಗ್ರ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಜಿಬಿಎ ಮತ್ತು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಪಿಓಪಿ ಗಣೇಶ ಮೂರ್ತಿಗಳ ನಿಷೇಧ ಹಾಗೂ ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪನೆಗೆ ಒತ್ತು ನೀಡಿವೆ. ಏಕಗವಾಕ್ಷಿ ಪದ್ಧತಿಯ ಮೂಲಕ ಅನುಮತಿ, ಸಿಸಿಟಿವಿ ಅಳವಡಿಕೆ, ವಿಸರ್ಜನೆಗೆ ಸಮಯ ಮಿತಿ ಮತ್ತು ಧ್ವನಿವರ್ಧಕ ಬಳಕೆಗೆ ನಿರ್ಬಂಧಗಳು ಜಾರಿಯಲ್ಲಿವೆ.

ಬೆಂಗಳೂರು, ಸೆಪ್ಟೆಂಬರ್​​ 11: ಬೆಂಗಳೂರಿನಲ್ಲಿ ಗೌರಿ ಗಣೇಶ ಹಬ್ಬದ ಸಡಗರ ಮನೆಮಾಡಿದ್ದು, ಈ ಬಾರಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಮತ್ತು ನಿಯಮಬದ್ಧವಾಗಿ ಆಚರಿಸಲು ಸಮಗ್ರ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಜಂಟಿಯಾಗಿ ಈ ಸೂಚನೆಗಳನ್ನು ಹೊರಡಿಸಿದೆ. ಪ್ರಮುಖವಾಗಿ, ಪಿಓಪಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪರಿಸರಕ್ಕೆ ಹಾನಿಕಾರಕವಾದ ರಾಸಾಯನಿಕ ಬಣ್ಣಗಳ ಬಳಕೆಯನ್ನೂ ನಿರ್ಬಂಧಿಸಲಾಗಿದೆ. ಬದಲಿಗೆ, ಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಬಳಸಿ ಹಬ್ಬವನ್ನು ಆಚರಿಸುವಂತೆ ನಾಗರಿಕರಿಗೆ ಮನವಿ ಮಾಡಲಾಗಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದ್ದು, ರಾತ್ರಿ 10 ಗಂಟೆಯ ಒಳಗೆ ವಿಸರ್ಜನೆ ಪೂರ್ಣಗೊಳಿಸಲು ಗಡುವು ವಿಧಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Follow Us