ದತ್ತಾತ್ರೇಯ ದೇವಸ್ಥಾನ ಅಭಿವೃದ್ಧಿ ಆಗ್ರಹಿಸಿ ಇಂದು ಗಾಣಗಾಪುರ ಬಂದ್, ಸುಡುವ ಬಿಸಿಲಲ್ಲಿ ಭಕ್ತರ ಪರದಾಟ

ಅರುಣ್​ ಕುಮಾರ್​ ಬೆಳ್ಳಿ

Updated on: May 01, 2025 | 3:29 PM

ಮುಳ್ಳಿನ ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ಕಡಿದು ರಸ್ತೆಗೆ ಅಡ್ಡ ಹಾಕಿ ಬಂದ್ ಮಾಡಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ದೇವರ ದರ್ಶನಕ್ಕೆ ಬೇರೆ ಬೇರೆ ಊರುಗಳಿಂದ ಭಕ್ತರು ಅದರಲ್ಲೂ ವಿಶೇಷವಾಗಿ ಮಕ್ಕಳು ಮತ್ತು ಮಹಿಳೆಯರು ಬಹಳ ಕಷ್ಟಪಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಮೇ ತಿಂಗಳು ಶುರುವಾಗಿದೆ ಮತ್ತು ಕಲಬರಗಿಯಲ್ಲಿ ತಾಪಮಾನ 44 ಡಿಗ್ರೀ ಸೆಲ್ಸಿಯಸ್​​ನಷ್ಟಿದೆ. ಕೆಂಡದಂಥ ಬಿಸಿಲು!

ಕಲಬುರಗಿ, ಮೇ 1: ಜಿಲ್ಲೆಯ ಅಫಜಲಪುರ ತಾಲ್ಲೂಕಿನಲ್ಲಿರುವ ಗಾಣಗಾಪುರ ಅನ್ನು ದೇವಲ್ ಗಾಣಗಾಪುರ ಅಂತಲೂ ಕರೆಯೋದುಂಟು. ಇಲ್ಲಿರುವ ದತ್ತಾತ್ರೇಯ ದೇವಸ್ಥಾನ ಕೇವಲ ಕರ್ನಾಟಕ ಮಾತ್ರವಲ್ಲ ನೆರೆ ರಾಜ್ಯಗಳಲ್ಲೂ ಖ್ಯಾತಿಪಡೆದಿದೆ. ಪ್ರತಿದಿನ ಸಾವಿರಾರು ಭಕ್ತರು ದತ್ತಾತ್ರೇಯನ ದರ್ಶನಕ್ಕೆ ಬರುತ್ತಾರೆ. ಆದರೆ ದೇವಸ್ಥಾನ ಮತ್ತು ಕ್ಷೇತ್ರದ ಅಭಿವೃದ್ಧಿಗಾಗಿ ಸರಕಾರ ಮುಂದಾಗದಿರುವುದು ಸ್ಥಳೀಯರನ್ನು ರೊಚ್ಚಿಗೆಬ್ಬಿಸಿವೆ. ಊರಿನ ರಸ್ತೆಗಳು ಸಹ ದುರಸ್ತಿಗಾಗಿ ಕಾಯುತ್ತಿವೆ. ದೇವಸ್ಥಾನದ ಅಭಿವೃದ್ದಿಗಾಗಿ ಆಗ್ರಹಿಸಿ ಇಂದು ಗಾಣಗಾಪುರ ಬಂದ್ ಗಾಗಿ ಕರೆ ನೀಡಿದ್ದು ಭಕ್ತರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಬಸ್, ಜೀಪು ಮತ್ತು ಇತರ ವಾಹನಗಳಲ್ಲಿ ಬರುತ್ತಿರುವ ಭಕ್ತರನ್ನು ಊರ ಹೊರವಲಯದಲ್ಲೇ ಇಳಿಸಲಾಗುತ್ತಿದೆ.

ಇದನ್ನೂ ಓದಿ: ಗಾಣಗಾಪುರ ದತ್ತಾತ್ರೇಯ ದೇವಸ್ಥಾನಕ್ಕೆ ಹರಿದು ಬಂದ ಭಕ್ತರ ದಂಡು

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.