AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು

ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು

ಶಿವಕುಮಾರ್ ಪತ್ತಾರ್
| Edited By: |

Updated on: Mar 14, 2026 | 8:52 PM

Share

ಗಂಗಾವತಿ ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಮೂರು ಜೋಡಿಗಳನ್ನು ಮತ್ತೆ ಒಂದುಗೂಡಿಸಿದೆ. ದಾಂಪತ್ಯದಲ್ಲಿನ ಮನಸ್ತಾಪ ಮರೆತು, ನ್ಯಾಯಾಧೀಶರ ಸಮ್ಮುಖದಲ್ಲಿ ಈ ದಂಪತಿಗಳು ಮರುಮದುವೆಯಾಗುವ ಮೂಲಕ ಪುನರ್ಮಿಲನ ಸಾಧಿಸಿದರು. ಇದು ಕುಟುಂಬ ಸಂಬಂಧಗಳನ್ನು ಬಲಪಡಿಸುವಲ್ಲಿ ನ್ಯಾಯಾಂಗದ ಪಾತ್ರ ಮತ್ತು ಲೋಕ ಅದಾಲತ್‌ನ ಯಶಸ್ಸನ್ನು ಎತ್ತಿ ತೋರಿಸುತ್ತದೆ.

ಕೊಪ್ಪಳ, ಮಾರ್ಚ್​​ 14: ದಾಂಪತ್ಯದಲ್ಲಿ ಬಿರುಕು ಮೂಡಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದ ಮೂರು ಜೋಡಿಗಳು ಮುನಿಸು ಮರೆತು ನ್ಯಾಯಾಲಯದಲ್ಲಿ ಮತ್ತೆ ಒಂದಾದ ಘಟನೆ ಗಂಗಾವತಿ ಒಂದನೇ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದ ಲೋಕ​ ಅದಾಲತ್​​ನಲ್ಲಿ ನಡೆದಿದೆ. ಒಂದಾದ ಜೋಡಿಗಳಿಗೆ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ್, ಗುಂಡಪ್ಪ ಬಸವಣ್ಣೆಪ್ಪ ಹಳ್ಳಾಕಾಯಿ, ನಾಗೇಶ ಪಾಟೀಲ್ ಮೇಘಾ ಸೋಮಣ್ಣವರ ಸಮ್ಮುಖದಲ್ಲಿ ಮರು ಮದುವೆ ಮಾಡಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More